ಶಬರಿಮಲೆ: ಭಕ್ತರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ

ತಿರುವನಂತಪುರ: ಶಬರಿಮಲೆ ಶ್ರೀ ಧರ್ಮಶಾಸ್ತಾ ಕ್ಷೇತ್ರದಲ್ಲಿ ಮಂಡಲ ಮಹೋತ್ಸವದ ತೀರ್ಥಾಟನೆಯು ನವೆಂಬರ್ 16ರಿಂದ ಆರಂಭಗೊಳ್ಳಲಿದ್ದು , ಈ ವೇಳೆ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ ಗೊಳಿಸಲಾಗಿದೆ.


ಕ್ಷೇತ್ರ ದರ್ಶನ ವರ್ಚುವಲ್ ಕ್ಯೂ ವ್ಯವಸ್ಥೆ ಮೂಲಕ ದೇವಾಲಯದಲ್ಲಿ ಭಕ್ತರನ್ನು ನಿಯಂತ್ರಿಸಲು ಹಾಗೂ ಕೋವಿಡ್ ಕಟ್ಟು ನಿಟ್ಟಿನ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಲು ಈಗಾಗಲೇ ಕೇರಳ ಸರಕಾರ ಸೂಚನೆ ನೀಡಿದೆ. ಶಬರಿಮಲೆ ದೇವಸ್ಥಾನದ ವಿಚಾರದಲ್ಲಿ ಆನ್ ಲೈನ್ ಮೂಲಕ ಜರಗಿದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಕೊರೋನಾ ನೆಗೆಟಿವ್ ಸರ್ಟಿಫಿಕೇಟ್ ನೊಂದಿಗೆ ಆಗಮಿಸುವ ಭಕ್ತರನ್ನು ಆನ್ ಲೈನ್ ರಿಜಿಸ್ಟ್ರೇಷನ್ ಮೂಲಕ ವರ್ಚುವಲ್ ಕ್ಯೂ ವ್ಯವಸ್ಥೆಯಲ್ಲಿ ಸೇರಿಸಲಾಗುವುದು ಎಂದು ಸರಕಾರವು ತಿಳಿಸಿದೆ.

Leave a Reply