ಕೊಯಮತ್ತೂರು: ಬಿಜೆಪಿ ಸೇರಿದ್ದ ಕೆ.ಅಣ್ಣಾಮಲೈ ವಿರುದ್ಧ ಕೇಸ್‌ ದಾಖಲು

ಕೆ ಅಣ್ಣಾಮಲೈ ಬಿಜೆಪಿ ಸೇರುವ ಸಂಬಂಧ ನಡೆದ ಕಾರ್ಯಕ್ರಮದಲ್ಲಿ ಕರೊನಾ ವೈರಸ್‌ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣ ನೀಡಿ ಸಬ್‌ ಇನ್ಸ್‌ಪೆಕ್ಟರ್ ಸುಗನ್ಯಾ ಎನ್ನುವವರು ಕೊಯಮತ್ತೂರಿನ ಠಾಣೆ ಯಲ್ಲಿ ದೂರು ದಾಖಲು ಮಾಡಿದ್ದಾರೆ.

ಕೊಯಮತ್ತೂರಿನ ವಿಕೆಕೆ ಮೆನನ್ ರಸ್ತೆಯ ಲ್ಲಿರುವ ಬಿಜೆಪಿ ಕಚೇರಿಗೆ ಅಣ್ಣಾಮಲೈ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು ಅದ್ದೂರಿಯಿಂದ ಸ್ವಾಗತಿ ಸಿದ್ದರು.

ಈ ಸಮಯದಲ್ಲಿ ನಿಯಮಗಳನ್ನು ಅವರು ಉಲ್ಲಂಘನೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇವರ ಜತೆಗೆ, ಬಿಜೆಪಿ ಕೆಲವು ಕಾರ್ಯಕರ್ತರ ವಿರುದ್ಧವೂ ಕೇಸು ದಾಖಲಿಸಲಾಗಿದೆ.

ಅಣ್ಣಾಮಲೈ ಅವರು ಬಿಜೆಪಿ ಸೇರಿದ್ದ ಹಿನ್ನೆಲೆ ಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ನಂತರ ಅಣ್ಣಾಮಲೈ ವಾಹನವೊಂದರಿಂದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದರು.

ಈ ಆಧಾರದ ಮೇಲೆ ದೂರು ದಾಖಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಆರ್.ನಂದಕುಮಾರ್, ಬಿಜೆಪಿ ರಾಜ್ಯ ಮಟ್ಟದ ನಾಯಕರಾದ ಜಿಕೆಎಸ್ ಸೆಲ್ವಕುಮಾರ್, ಎಸ್.ಆರ್. ಸೇಕರ್ ಮತ್ತು ಕನಗಸಬಪತಿ ಮತ್ತು ಇತರ ಕೆಲವು ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

ಇವರ ವಿರುದ್ಧ ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 143, 269, 270, 285, 341 ಹಾಗೂ ಸಾಂಕ್ರಾಮಿಕ ರೋಗಗಳ ಕಾಯ್ದೆಯ ಸೆಕ್ಷನ್ 3ರ ಅನ್ವಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

 
 
 
 
 
 
 
 
 
 
 

Leave a Reply