ದೆಹಲಿ: ಶಿಕ್ಷಕರಿಗೆ ರಾಷ್ಟ್ರ‍ೀಯ ಪ್ರಶಸ್ತಿ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ರವರು ದೆಹಲಿಯಲ್ಲಿ ಇಂದು ವರ್ಚುವಲ್ ಸಮಾ ರಂಭದ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸಾಧನೆಯನ್ನು ಮಾಡಿರುವ ಶಿಕ್ಷಕರಿಗೆ ರಾಷ್ಟ್ರ‍ೀಯ ಪ್ರಶಸ್ತಿ ಪ್ರದಾನ ಮಾಡಿದರು.

ಬಳಿಕ ಮಾತನಾಡಿದ ರಾಷ್ಟ್ರಪತಿಯವರು, ಶಿಕ್ಷಣದ ಗುಣಮಟ್ಟ ಸುಧಾರಣೆಯಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಸನ್ನಡತೆ ಅಳವಡಿಸಿ ಅವರ ಬದುಕನ್ನು ಸಮೃದ್ಧವಾಗಿ ಸುವಲ್ಲಿ ಶಿಕ್ಷಕರ ಪಾತ್ರವು ಮಹತ್ವದ್ದಾಗಿದೆ ಎಂದರು. ಶಾಲಾ ಶಿಕ್ಷಣ ಗುಣಮಟ್ಟ ಸುಧಾರಣೆಗೆ ವಿಶೇಷವಾಗಿ ಶ್ರಮಿಸಿದ 47 ಶಿಕ್ಷಕರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ರಾಷ್ಟ್ರಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಶಿಕ್ಷಣ ಸಚಿವ ರಮೇಶ್ ಪೊಖ್ರಿಯಾಲ್ ನಿಶಾಂಖ್ ಮತ್ತು ಶಿಕ್ಷಣ ಖಾತೆ ರಾಜ್ಯ ಸಚಿವ ಸಂಜಯ್ ಧೋತ್ರೆ ಉಪಸ್ಥಿತರಿದ್ದರು.

ರಾಜ್ಯದ ಮೂವರು ಶಿಕ್ಷಕರು ಈ ಪ್ರತಿಷ್ಠಿತ ರಾಷ್ಟ್ರ‍ೀಯ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾಡಾ ಸರ್ಕಾರಿ ಶಾಲೆಯ ಗಣಿತ ಶಿಕ್ಷಕ ಯಾಕೂಬ್, ಕಲಬುರಗಿಯ ಬಂದರ ವಾಡದ ಸರ್ಕಾರಿ ಪ್ರೌಢ ಶಾಲಾ ಶಿಕ್ಷಕಿ ಸುರೇಖಾ ಜಗನ್ನಾಥ್ ಹಾಗೂ ಬೆಂಗಳೂರು ಜಾಲಹಳ್ಳಿ ಎ.ಎಫ್.ಎಸ್ ಕೇಂದ್ರೀಯ ವಿದ್ಯಾಲಯದ ಮುಖ್ಯ ಶಿಕ್ಷಕಿ ಚೆಮ್ಮಲಾರ್ ಶಣ್ಮುಗಪ್ಪ ಪ್ರಶಸ್ತಿಗೆ ಭಾಜನರಾಗಿದ್ದಾರೆ.

 
 
 
 
 
 
 
 
 
 
 

Leave a Reply