ಕಾಂಗ್ರೆಸ್ ಹಿರಿಯ ನಾಯಕ ಅಹಮದ್ ಪಟೇಲ್ ನಿಧನ 

ದೆಹಲಿ: ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್(71) ವಿಧಿವಶರಾಗಿದ್ದಾರೆ. ಮುಂಜಾನೆ 3.30ರ ಸುಮಾರಿಗೆ ದೆಹಲಿಯ ಮೇದಾಂತ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು ಈ ಬಗ್ಗೆ ಅಹ್ಮದ್ ಪಟೇಲ್ ಪುತ್ರ ಫೈಸಲ್ ಟ್ವೀಟ್ ಮಾಡವ ಮೂಲಕ ಸ್ಪಷ್ಟಪಡಿಸಿದ್ದಾರೆ.

ಒಂದು ತಿಂಗಳ ಹಿಂದಷ್ಟೇ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ರು. ಬಹು ಅಂಗಾಂಗ ವೈಫಲ್ಯದಿಂದಲೂ ಬಳಲುತ್ತಿದ್ದ ಅಹ್ಮದ್ ಪಟೇಲ್ ನ.25ರಂದು ಮುಂಜಾನೆ ಚಿಕಿತ್ಸೆ ಫಲಿಸದೆ ವಿಧಿವಶರಾಗಿದ್ದಾರೆ.

1949ರ ಆ. 21ರಂದು ಗುಜರಾತ್‌ನಲ್ಲಿ ಜನಿಸಿದ್ದ ಅಹ್ಮದ್‌ ಪಟೇಲ್ ಲೋಕಸಭೆಗೆ 3 ಬಾರಿ ಆಯ್ಕೆಯಾಗಿದ್ದರು. 5 ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಸೋನಿಯಾ​ ​ಗಾಂಧಿ ​ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಪಟೇಲ್ ​ಸೋನಿಯಾಗೆ ರಾಜಕೀಯ ಕಾರ್ಯದರ್ಶಿ ​ಕೂಡಾ ​ಆಗಿದ್ದರು.  

Leave a Reply