Janardhan Kodavoor/ Team KaravaliXpress
24.6 C
Udupi
Thursday, June 30, 2022
Sathyanatha Stores Brahmavara

ನಾಳೆ ದೇಶದೆಲ್ಲೆಡೆ ಭಾರೀ ಭದ್ರತೆ


ಲಖನೌ: ಇಡೀ ದೇಶವೇ ಕಾತರದಿಂದ ಕಾಯುತ್ತಿರುವ ಬಾಬ್ರಿ ಕಟ್ಟಡ ಧ್ವಂಸ ಪ್ರಕರಣದ ಅಂತಿಮ ತೀರ್ಪು ನಾಳೆ​. ​ಅಂದರೆ ಸೆಪ್ಟೆಂಬರ್ 30ರಂದು ಸಿಬಿಐ ವಿಶೇಷ ನ್ಯಾಯಾಲಯ ನೀಡಲಿದೆ.​ ಸಿಬಿಐ ವಿಶೇಷ ಕೋರ್ಟ್ ನೀಡಲಿರುವ ಈ ತೀರ್ಪು​ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಪೀಠವನ್ನು ಹೊಂದಿದೆ. ಬಾಬ್ರಿ ಕಟ್ಟಡ ಧ್ವಂಸ ಪ್ರಕರಣದ ತೀರ್ಪನ್ನು 27 ವರ್ಷಗಳ ನಂತರದಲ್ಲಿ ನಾಳೆ ಪ್ರಕಟಿಸಲಿದೆ.

ಅಂತಿಮ ತೀರ್ಪು ಪ್ರಕಟಿಸುವ ಸಂದರ್ಭ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ 32 ಆರೋಪಿಗಳು ಕೋರ್ಟ್ ನಲ್ಲಿ ಹಾಜರಿರುವಂತೆ ನಿರ್ದೇಶಿಸಲಾಗಿದೆ.​ ಪ್ರಮುಖ ಆರೋಪಿಗಳಲ್ಲಿ ಈಗಾಗಲೇ 17ಜನ ಮೃತಪಟ್ಟಿದ್ದು ಉಳಿದಂತೆ ಬಿಜೆಪಿಯ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಶಿ, ಉಮಾಭಾರತಿ, ಕಲ್ಯಾಣ್ ಸಿಂಗ್, ವಿನಯ್ ಕಟಿಯಾರ್, ಸಾಕ್ಷಿ ಮಹಾರಾಜ್ ಸೇರಿದಂತೆ ಹಲವರು ಹಾಜರಿರಬೇಕಿದೆ.


ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ  ಸೂಕ್ಮ ಹಾಗೂ ಅತೀ ಸೂಕ್ಮ ಪ್ರದೇಶ ಸೇರಿದಂತೆ ಎಲ್ಲೆಡೆ ಭದ್ರತೆ ಕೈಗೊಳ್ಳಲಾಗಿದೆ ಎನ್ನಲಾಗಿದೆ.​ ​ಸೆಪ್ಟೆಂಬರ್ 1ರಂದು ಬಾಬ್ರಿ​ ​ಕಟ್ಟಡ ಧ್ವಂಸ ಪ್ರಕರಣದ ವಾದ-ಪ್ರತಿವಾದ ಅಂತ್ಯಗೊಂಡಿದ್ದು ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಒಟ್ಟು 600 ಸಾಕ್ಷ್ಯಚಿತ್ರಗಳ ಮತ್ತು​ 351 ಜನರ ಸಾಕ್ಷ್ಯಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.​​
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!