ಸ್ವಿಜರ್ ಲ್ಯಾಂಡ್ ನಲ್ಲಿ ಬುರ್ಖಾ ನಿಷೇಧ

ಲಂಡನ್:  ಸ್ವಿಜರ್ ಲ್ಯಾಂಡ್ ಸಾರ್ವಜನಿಕ ಸ್ಥಳಗಳಲ್ಲಿ ಬುರ್ಖಾ ಧರಿಸುವುದನ್ನು ನಿಷೇಧಿಸಿದೆ. ನಿಯಮ ಉಲ್ಲಂಘಿಸಿದರೆ  83 ಸಾವಿರ ರೂಪಾಯಿ  ದಂಡ  ತೆರಬೇಕಾಗಿದೆ. ಈ ಸಂಬಂಧ  ದಂಡ ವಿಧಿಸುವ ನಿಟ್ಟಿನಲ್ಲಿ  ಪ್ರಸ್ತಾವನೆ ಸಲ್ಲಿಸಲಾಗಿದೆ. ಹಿಜಾಬ್ ವಿರೋಧಿಸಿ ಇರಾನ್ ನಲ್ಲಿ ಭಾರೀ ಪ್ರತಿಭಟನೆ ನಡೆಯುತ್ತಿರುವ ಮಧ್ಯೆ  ಸ್ವಿಜರ್ ಲ್ಯಾಂಡ್ ನಲ್ಲಿ ಈ ಬೆಳವಣಿಗೆ ನಡೆದಿದೆ. ಭಾರತದಲ್ಲಿ ಕೂಡ ಹಿಜಾಬ್ ವಿವಾದ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.

ಸ್ವಿಜರ್ ಲ್ಯಾಂಡ್ ನಲ್ಲಿ ಬುರ್ಖಾ ನಿಷೇಧ ಹಾಗೂ  ಉಲ್ಲಂಘನೆಗೆ 82,000 ರೂಪಾಯಿ ದಂಡ ವಿಧಿಸುವ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಕ್ಟೋಬರ್ 12 ರಂದು  ಸಂಸತ್ತಿನಲ್ಲಿ ಈ ಮಸೂದೆ ಮಂಡಿಸಲಾಗಿದೆ. ಕಳೆದ ವರ್ಷ  ಜನಾಭಿಪ್ರಾಯ ಸಂಗ್ರಹಿಸಿದ ಬಳಿಕ  ಸುರಕ್ಷತೆ ಕಾರಣ ನೀಡಿ ಮುಖ ಮುಚ್ಚುವ ವಸ್ತ್ರಗಳನ್ನು ನಿಷೇಧಿಸಲಾಗಿತ್ತು.  ಇದೀಗ ಈ ನಿಯಮ ಉಲ್ಲಂಘಿಸಿದರೆ  ಭಾರೀ ದಂಡ ವಿಧಿಸುವ ಪ್ರಸ್ತಾವನೆ ಮಂಡಿಸಲಾಗಿದೆ

Leave a Reply