ಬಿಜೆಪಿ ವೆಟ್ರಿವೇಲ್ ಯಾತ್ರೆ: ತಮಿಳುನಾಡಿನಲ್ಲಿ ಸಿ.ಟಿ.ರವಿ ಸೇರಿದಂತೆ ಬಿಜೆಪಿ ಮುಖಂಡರು ಬಂಧನ

ಚೆನ್ನೈ: 2021ರಲ್ಲಿ ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಗೂ ಮುನ್ನ ಹಿಂದೂ ಮತಗಳನ್ನು ಕ್ರೋಢಿಕರಿಸಲು ಬಿಜೆಪಿ ವೆಟ್ರಿವೇಲ್ ಯಾತ್ರೆ ನಡೆಸಲು ಸಿದ್ಧವಾಗಿದೆ. ಆದರೆ ತಮಿಳುನಾಡು ಸರ್ಕಾರ ಇದಕ್ಕೆ ಅನುಮತಿ ನೀಡಿರಲಿಲ್ಲ. ಇದರ ಹೊರತಾಗಿಯೂ ಯಾತ್ರೆ ನಡೆಸಿರುವ ಬಿಜೆಪಿ ಮುಖಂಡರನ್ನು ಪೊಲೀಸರು ವಶ ಪಡೆದಿದ್ದಾರೆ.

ಈ ಯಾತ್ರೆ ನಡೆಸಲು ಯತ್ನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಎಲ್ ಮುರುಗನ್, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಹಿರಿಯ ನಾಯಕ ಎಚ್.ರಾಜಾ ಸೇರಿದಂತೆ ನಾಯಕರನ್ನು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಾತ್ರೆ ನ. 6ರಂದು ತಿರುಟ್ಟಾನಿಯಿಂದ ಪ್ರಾರಂಭವಾಗಿ ಒಂದು ತಿಂಗಳ ನಂತರ ತಿರುಚೆಂದೂರಿನಲ್ಲಿ ಅಂತ್ಯವಾಗಬೇಕಿತ್ತು.

ಕರೊನಾ ಕಾರಣ ರಾಜ್ಯ ಸರ್ಕಾರ ಈ ಯಾತ್ರೆಗೆ ಅನುಮತಿಸಿರಲಿಲ್ಲ. ಆದರೂ ಯಾತ್ರೆ ನಡೆಸಲು ಮುಂದಾಗಿದ್ದರು ಎಂದು ತಿಳಿದು ಬಂದಿದೆ. ಯಾತ್ರೆಗೂ ಮೊದಲು ತಿರುಟ್ಟಾನಿ ಮುರುಗನ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ನಂತರ ಮುರುಗನ್ ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ್ದು, ಬಳಿಕ ಯಾತ್ರೆಗೆ ಹೊರಡಲು ಮುಂದಾದಾಗ, ಪೊಲೀಸ್ ಸಿಬ್ಬಂದಿ ಅವರನ್ನು ವಶಕ್ಕೆ ಪಡೆದಿದ್ದಾರೆ.

 
 
 
 
 
 
 
 
 
 
 

Leave a Reply