ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಧನಂಜಯ ವೈ ಚಂದ್ರಚೂಡ್ ನೇಮಕ

ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ರಾಷ್ಟ್ರಪತಿಗಳು ನೇಮಕ ಮಾಡಿದ್ದಾರೆ.
ನವೆಂಬರ್ 9, 2022 ರಿಂದ ಜಾರಿಗೆ ಬರುವಂತೆ ನೇಮಕ ಮಾಡಿದ್ದಾರೆ.

ಹಾಲಿ ಸಿಜೆಐ ಯುಯು ಲಲಿತ್ ಅವರ ನಿವೃತ್ತಿಯ ನಂತರ ನ್ಯಾಯಮೂರ್ತಿ ಚಂದ್ರಚೂಡ್ ಅವರು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ನಿರ್ಗಮಿತ ಸಿಜೆಐ ಯುಯು ಲಲಿತ್ ಅವರು ಅಕ್ಟೋಬರ್ 11 ರಂದು ನ್ಯಾಯಮೂರ್ತಿ ಚಂದ್ರಚೂಡ್ ಅವರ ಹೆಸರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದರು.

 
 
 
 
 
 
 
 
 
 
 

Leave a Reply