ಉಡುಪಿಯಲ್ಲಿ ರಾಷ್ಟ್ರೀಯ ಮಟ್ಟದ ಡ್ರ್ಯಾಗನ್ ಬೋಟ್ ಪಂದ್ಯಾವಳಿ

ರಾಷ್ಟ್ರೀಯ ಮಟ್ಟದ ಡ್ರ್ಯಾಗನ್ ಬೋಟ್ ಪಂದ್ಯಾವಳಿ ಫೆಬ್ರವರಿ 23 ರಿಂದ 26ರ ವರೆಗೆ ಉಪ್ಪೂರಿನ ಮಡಿಸಾಲು ನದಿಯಲ್ಲಿ ನಡೆಯಲಿದ್ದು, ಇಂದು ದಿನಾಂಕ 20-02-2023 ರಂದು ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಪೂರ್ವ ಸಿದ್ಧತೆಯ ಬಗ್ಗೆ ಅಧಿಕಾರಿಗಳು ಮತ್ತು ಸ್ಥಳೀಯರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಷ್ಟ್ರೀಯ ಮಟ್ಟದ ಈ ಪಂದ್ಯಾವಳಿಯಲ್ಲಿ ದೇಶದ ವಿವಿಧ ಭಾಗಗಳಿಂದ 700 ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಲಿದ್ದು, ವಿಜೇತರಾದವರು ಏಷ್ಯನ್ ಗೇಮ್ಸ್ ನಲ್ಲಿ ಭಾರತದಿಂದ ಪ್ರತಿನಿಧಿಸಲಿದ್ದಾರೆ.

ಈ ಸಂದರ್ಭದಲ್ಲಿ ಡ್ರ್ಯಾಗನ್ ಬೋಟ್ ಪಂದ್ಯಾವಳಿಯ ಸ್ವಾಗತ ಸಮಿತಿಯ ಅಧ್ಯಕ್ಷರಾದ ಬಿರ್ತಿ ರಾಜೇಶ್ ಶೆಟ್ಟಿ, ರಾಜ್ಯ ಕಯಾಕಿಂಗ್ ಅಸೋಸಿಯೇಷನ್ ಕಾರ್ಯದರ್ಶಿಗಳಾದ ದಿಲೀಪ್ ಕುಮಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ರೋಷನ್ ಶೆಟ್ಟಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply