ದೇಶಾದ್ಯಂತ 56994 ಮಂದಿ ಕಳೆದ 24 ತಾಸಿನಲ್ಲಿ ಕೊರೋನಾದಿಂದ ಗುಣಮುಖ

24 ಗಂಟೆಗಳಲ್ಲಿ ದೇಶಾದ್ಯಂತ 37,566 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 3,03,16,897 ಕ್ಕೆ ಏರಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ. ಇದು 102 ದಿನಗಳ ನಂತರ ಅತ್ಯಂತ ಕಡಿಮೆ ಪಾಸಿಟಿವ್ ಪ್ರಕರಣವಾಗಿದೆ. 

ಇದೇ ವೇಳೆ 56,994 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 5,52,659 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 2,93,66,601 ಮಂದಿ ಗುಣಮುಖ ರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 907 ಮಂದಿ ಸಾವನ್ನಪ್ಪಿದ್ದಾರೆ, ಇಲ್ಲಿಯವರೆಗೆ ಒಟ್ಟು 3,97,637 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. 

ದೇಶದ ಚೇತರಿಕೆ ಪ್ರಮಾಣ ನಿರಂತರವಾಗಿ ಏರಿಕೆಯನ್ನು ಕಾಣುತ್ತಿದ್ದು ಇದೀಗ ಶೇ. 96.87% ತಲುಪಿದೆ.

ಜೂನ್ 28 ರಂದು 17,68,008 ಮಾದರಿಗಳನ್ನು ಸಂಗ್ರಹಿಸಿ ಕೋವಿಡ್ ಪರೀಕ್ಷೆಗೆ ಕಳುಹಿಸ ಲಾಗಿದೆ. ಇಲ್ಲಿಯವರೆಗೆ 40,81,39,287 ಮಾದರಿಗಳನ್ನು ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಮಾಹಿತಿ ನೀಡಿದೆ.

 
 
 
 
 
 
 
 
 
 
 

Leave a Reply