Janardhan Kodavoor/ Team KaravaliXpress
28.6 C
Udupi
Thursday, August 11, 2022
Sathyanatha Stores Brahmavara

 ಮಂಗಳೂರಿನ ವಿಮಾನ​ ​ನಿಲ್ದಾಣಕ್ಕೆ ಶ್ರೀಮಧ್ವಶಂಕರ ವಿಮಾನ​ ​ನಿಲ್ದಾಣವೆಂದು ನಾಮಕರಣ ಮಾಡುವುದು ಸೂಕ್ತ ​: ಪುತ್ತಿಗೆ ಶ್ರೀ 

ಇಡೀ ಜಗತ್ತು ಲಾಗಾಯ್ತಿನಿಂದ ಭಾರತವನ್ನು ಮುಖ್ಯವಾಗಿ ಆಧ್ಯಾತ್ಮಿಕ ದೃಷ್ಟಿಯಿಂದಲೇ ಗುರುತಿಸುತ್ತಿದ್ದು, ರಾಜಕಾರಣಿಗಳೂ ಕೂಡಾ  ಭಾರತವನ್ನು ‘ವಿಶ್ವಗುರು’ ಮಾಡಬೇಕೆಂದು ಪದೇ ಪದೇ ಪುನರುಚ್ಚರಿಸುತ್ತಿದ್ದು ಈ ದೃಷ್ಟಿಯಲ್ಲಿ ಭಾರತೀಯ ಮೇರು ದಾರ್ಶನಿಕರಾಗಿ ಈಗಾಗಲೇ ವಿಶ್ವಗುರು ಎಂದೆನಿಸಿರುವ ಹಾಗೂ ಮಂಗಳೂರು ಸಮೀಪದ ಉಡುಪಿ, ಶೃಂಗೇರಿಯಲ್ಲಿ ತಮ್ಮ ಕೇಂದ್ರಗಳನ್ನು ಸ್ಥಾಪಿಸಿ ಶತಶತಮಾನಗ​​ಳಿಂದ ತಮ್ಮ ಆಧ್ಯಾತ್ಮಿಕ ಕಾರ್ಯಕ್ಷೇತ್ರಗೊಳಿಸಿರುವ ಜಗದ್ಗುರು ಶ್ರೀಮಧ್ವಾಚಾರ್ಯ, ಜಗದ್ಗುರು ಶ್ರೀಶಂಕರಾಚಾರ್ಯರ  ಹೆಸರಲ್ಲಿ ಪರಶುರಾಮ​ ​ಕ್ಷೇತ್ರದಲ್ಲಿರುವ ಮಂಗಳೂರಿನ ವಿಮಾನನಿಲ್ದಾಣಕ್ಕೆ ಶ್ರೀಮಧ್ವಶಂಕರ ವಿಮಾನನಿಲ್ದಾಣವೆಂದು ನಾಮಕರಣ ಮಾಡುವುದು ಅದು ಅತ್ಯಂತ ಅರ್ಥಪೂರ್ಣ, ಅಪೂರ್ವ ಮತ್ತು ಮೌಲಿಕವೆನಿಸುತ್ತದೆ.
ಅಯೋಧ್ಯೆಯಲ್ಲಿ ಶ್ರೀರಾಮನ ಹೆಸರಿನಲ್ಲಿ ವಿಮಾನನಿಲ್ದಾಣ ಮೂಡಿಬಂ​ದಂತೆ ದಾರ್ಶನಿಕ ಆಚಾರ್ಯರುಗಳ ನೆಲೆವೀಡಾದ ದಕ್ಷಿಣ​ ​ಭಾರತದ ವಿಮಾನ​ ​ನಿಲ್ದಾಣಕ್ಕೆ ಶ್ರೀಮಧ್ವಶಂಕರರ ನಾಮಕರಣ ಭಾರತದ ದಾರ್ಶನಿಕ ಪರಂಪರೆಗೆ ಗೌರವ ಸಲ್ಲಿಸಿದಂತಾಗುವುದು. ಮಾತ್ರವಲ್ಲದೆ ಜಗತ್ತಿನಲ್ಲಿ ಧರ್ಮಪ್ರಚಾರಕ್ಕೆ ಅದು ಪೂರಕವೂ ಆಗುವುದಲ್ಲದೆ ಭಾವೈಕ್ಯಕ್ಕೂ ಇಂಬುನೀಡುತ್ತದೆ ಎಂದು, ಜಗದ್ಗುರು ಶ್ರೀಮಧ್ವಾಚಾರ್ಯಮೂಲ​ ​ಮಹಾಸಂಸ್ಥಾನ ಶ್ರೀಮದುಪೇಂದ್ರತೀರ್ಥಪೀಠದ ಪೀಠಾಧೀಶರಾದ ಉಡುಪಿ ಶ್ರೀಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಇಂದು ತಮ್ಮ ಹೇಳಿಕೆಯ ಮುಖಾಂತರ ಈ ಬಗ್ಗೆ ಸಂ​ಬಂದಪಟ್ಟವರು ಗಮನಹರಿಸಬೇಕೆಂದು ಕೋರಿರುತ್ತಾರೆ.
ಆಧ್ಯಾತ್ಮಿಕತೆಯೇ ಭಾರತದ ಮೂಲ ಮತ್ತು ಅಪೂರ್ವ ಸಂಪತ್ತಾದ್ದರಿ​ರಿಂದ ಧಾರ್ಮಿಕ ಆಧ್ಯಾತ್ಮಿಕ ಕ್ಷೇತ್ರದಲ್ಲೇ ಭಾರತಕ್ಕೆ ಮುಂದೆ ಜಗತ್ತಿನ ನೇತೃತ್ವ ಪಡೆಯಲು ಉಜ್ವಲ ಹಾಗೂ ವಿಪುಲ ಅವಕಾಶವಿರುವುದರಿಂದಲೂ, ಶ್ರೀರಾಮಾನುಜಾಚಾರ್ಯ, ಬಸವಣ್ಣ ಮೊದಲಾದ ಮಹಾ ಧಾರ್ಮಿಕ ನೇತಾರರ ಮೂಲಸ್ಥಳಗಳ ಸಮೀಪದಲ್ಲಿರುವ ದೇಶದ ಉಳಿದ ವಿಮಾನ ನಿಲ್ದಾಣಾದಿಗಳಿಗೂ  ಆ ಧಾರ್ಮಿಕ ನೇತಾರರ ನಾಮಕರಣ ಮಾಡುವುದೇ ಉಳಿದೆಲ್ಲ ಆಯ್ಕೆಗಳಿಗಿಂತಲೂ ಅತ್ಯಂತ ಪ್ರಶಸ್ತ ಎಂದು ಶ್ರೀಶ್ರೀಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. 

ಕೊರೋನಾದಿಗಳ ಹಿನ್ನೆಲೆಯಲ್ಲಿ ಚಿಂತಿಸಿದಾಗ ಜಗತ್ತಿಗೆ ಇದೀಗ ಆಧ್ಯಾತ್ಮಿಕ ಆಂದೋಲನದ ಆವಶ್ಯಕತೆ ಬಹುವಾಗಿ ಎದ್ದುಕಾಣುತ್ತಿದ್ದು ಈ ಹಿನ್ನೆಲೆಯಲ್ಲಿ ಧಾರ್ಮಿಕ ಆಧ್ಯಾತ್ಮಿಕತೆಗೆ ಸರಕಾರಗಳು ಹೆಚ್ಚಿನ ಒತ್ತು ನೀಡುವ ದೃಷ್ಟಿಯಲ್ಲೂ ಶ್ರೀಮಧ್ವಶಂಕರ ವಿಮಾನನಿಲ್ದಾಣದ ನಾಮಕರಣ ಅತ್ಯಂತ ಸೂಕ್ತ ಹಾಗೂ ಸಂದರ್ಭೋಚಿತ​ವೆಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
​​
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!