ಟೋಕಿಯೊ ಒಲಿಂಪಿಕ್ಸ್ ಮಹಿಳಾ ಹಾಕಿ ಪಂದ್ಯದಲ್ಲಿ ಭಾರತ ಸೆಮಿಫೈನಲ್ ಗೆ

ಟೋಕಿಯೊ: ಇಂದು ನಡೆದ ಟೋಕಿಯೊ ಒಲಿಂಪಿಕ್ಸ್ ಮಹಿಳಾ ಹಾಕಿ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 1-0 ಅಂತರದಲ್ಲಿ ಭಾರತ ಗೆಲುವು ಸಾಧಿಸಿ ಸೆಮಿಫೈನಲ್ ಗೆ ಪ್ರವೇಶಿಸಿದೆ. 

ಈ ಮೂಲಕ ವನಿತಾ ಹಾಕಿಯಲ್ಲಿ ಮೊದಲ ಬಾರಿಗೆ ಒಲಿಂಪಿಕ್ಸ್ ಸೆಮಿಫೈನಲ್ ಪ್ರವೇಶಿಸಿದ ದಾಖಲೆಯನ್ನು ಭಾರತ ನಿರ್ಮಿಸಿದೆ.

ಗುರ್ಜಿತ್ ಕೌರ್ ಹೊಡೆದ ಗೋಲು ಭಾರತಕ್ಕೆ ವರದಾನವಾಗಿ ಪರಿಣಮಿಸಿತು. ಅತ್ಯುತ್ತಮ ಡಿಫೆನ್ಸ್ ಮೂಲಕ ಆಸ್ಟ್ರೇಲಿಯಾ ತಂಡದ ಬೆವರಿಳಿಸಿದ ಭಾರತದ ವನಿತೆಯರು, ಸರ್ವಾಂಗೀಣ ಪ್ರದರ್ಶನದ ಮೂಲಕ ಪದಕದ ಆಸೆಯನ್ನು ಜೀವಂತವಾಗಿರಿಸಿದ್ದಾರೆ.

 
 
 
 
 
 
 
 
 
 
 

Leave a Reply