ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ನಮನ

ಪುಲ್ವಾಮಾ ಭಯೋತ್ಪಾದಕರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪ್ರಧಾನಿ ಮೋದಿ ಗೌರವ ನಮನ ಸಲ್ಲಿಸಿದ್ದಾರೆ.

2019 ಫೆ.14 ರಂದು ನಡೆದ ದಾಳಿಯಲ್ಲಿ ಹುತಾತ್ಮರಾದ ಯೋಧರ ಬಲಿದಾನ ತ್ಯಾಗವನ್ನು ಪ್ರಧಾನಿ ಮೋದಿ ಸ್ಮರಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದು, 2019 ರ ಈ ದಿನದಂದು ಪುಲ್ವಾಮಾದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ನಾನು ನಮನ ಸಲ್ಲಿಸುತ್ತೇನೆ. ರಾಷ್ಟ್ರಕ್ಕೆ ಅವರು ನೀಡಿದ ಸೇವೆ ಸದಾ ಸ್ಮರಿಸುತ್ತೇವೆ. ಅವರ ಶೌರ್ಯ ಹಾಗೂ ಬಲಿದಾನ ಪ್ರತೀ ಭಾರತೀಯನಿಗೂ ಪ್ರೇರಕ ಎಂದಿದ್ದಾರೆ.

 
 
 
 
 
 
 
 
 
 
 

Leave a Reply