Janardhan Kodavoor/ Team KaravaliXpress
24.6 C
Udupi
Thursday, June 30, 2022
Sathyanatha Stores Brahmavara

ನರೇಂದ್ರ ದಾಮೋದರ್ ದಾಸ್ ಮೋದಿ ಬೆಂಗಳೂರಿಗೆ ಆಗಮನ

ಬೆಂಗಳೂರು: ನಗರಕ್ಕೆ ಆಗಮಿಸಿದ ‌ಪ್ರಧಾನಿ ನರೇಂದ್ರ ಮೋದಿಯವರ ಎರಡು ದಿನಗಳ ರಾಜ್ಯ ಪ್ರವಾಸ ಸಂದರ್ಭದಲ್ಲಿ ಯಾವುದೇ ರಾಜಕೀಯ ಭೇಟಿ ಹಾಗೂ ಚರ್ಚೆಗೆ ಅವಕಾಶ ಹಾಗೂ ಸಮಯ ನಿಗದಿಯಾಗಿಲ್ಲ ಎಂದು ಮಾಹಿತಿ ತಿಳಿದು ಬಂದಿದೆ.
ಅಭಿವೃದ್ಧಿ ಕಾರ್ಯಕ್ರಮಗಳ ಶಿಲಾನ್ಯಾಸ ಹಾಗೂ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಉದ್ಘಾಟನೆ ಹಾಗೂ ಇನ್ನಿತರ ಪೂರ್ವ ನಿಗದಿತ ಕಾರ್ಯಕ್ರಮಗಳಲ್ಲಿ ಮಾತ್ರ ಅವರು ಭಾಗವಹಿಸಲಿದ್ದಾರೆ. ಸುಮಾರು 900 ದಿನಗಳ ನಂತರ ಮೋದಿ ರಾಜ್ಯ ಪ್ರವಾಸಕ್ಕೆ ಬಂದಿದ್ದರೂ ಪಕ್ಷದ ಕಚೇರಿಗೂ ಭೇಟಿ ಇಲ್ಲ ಎಂದು ತಿಳಿಯಲಾಗಿದೆ.
ಇಂದು ಆದರೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಹನ್ನೊಂದು ತಿಂಗಳ ಬಳಿಕ ಮಾಜಿ ಸಿಎಂ‌ ಯಡಿಯೂರಪ್ಪ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ.
ಬೆಂಗಳೂರಿಗೆ ವಿಮಾನದಲ್ಲಿ ಆಗಮಿಸಿದ ಪ್ರಧಾನಿ ಮೋದಿ ಅವರಿಗೆ ರಾಜ್ಯಪಾಲ, ಸಿಎಂ,ಬಿಜೆಪಿ ರಾಜ್ಯ ಅಧ್ಯಕ್ಷರು ಸೇರಿದಂತೆ ಅನೇಕ ಗಣ್ಯರು ಸ್ವಾಗತಿಸಿದರು.
ಸಿಎಂ ಬೊಮ್ಮಾಯಿ ಜತೆ ತೆರಳಿ ಪ್ರಧಾನಿಯವರನ್ನು ಯಡಿಯೂರಪ್ಪ ಸ್ವಾಗತಿಸಿದರು. ಈ ಸಂದರ್ಭದಲ್ಲಿ‌‌ ಕೆಲ ಸಮಯ ಮೋದಿ ಯಡಿಯೂರಪ್ಪ ಅವರನ್ನು ಆತ್ಮೀಯವಾಗಿ ಮಾತನಾಡಿಸಿದರು. ಇದನ್ನು ಹೊರತುಪಡಿಸಿದರೆ ಮತ್ತೆ ಯಾವ ರಾಜಕೀಯ ನಾಯಕರನ್ನೂ ಅಧಿಕೃತ ವೇದಿಕೆ ಹೊರತುಪಡಿಸಿ ಎಲ್ಲಿಯೂ ಭೇಟಿ ಇಲ್ಲ ಎಂದು ಮಾಹಿತಿ ತಿಳಿಯಲಾಗಿದೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!