ದೆಹಲಿಯಲ್ಲಿ ಮೋದಿ ಅವರನ್ನು ಭೇಟಿಯಾದ ಮಮತಾ ಬ್ಯಾನರ್ಜಿ

ಕೇಂದ್ರ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಲ್ಕು ದಿನಗಳ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಇಂದು ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.

ಪ್ರಧಾನಿ ಜೊತೆಗಿನ ಸಭೆಯಲ್ಲಿ ರಾಜ್ಯಕ್ಕೆ ಬರಬೇಕಾಗಿರುವ ಜಿಎಸ್​ಟಿ ಪಾಲು ಸೇರಿದಂತೆ ಅನೇಕ ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆಂದು ತಿಳಿದು ಬಂದಿದೆ.

ಇಂದು ಮತ್ತೆ ನೂತನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಮಮತಾ ಬ್ಯಾನರ್ಜಿ ಭೇಟಿ ಮಾಡಲಿದ್ದು, ಅವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ದೆಹಲಿಯಲ್ಲಿ ಆಗಸ್ಟ್​ 7ರಂದು ಮೋದಿ ನೇತೃತ್ವದಲ್ಲಿ ನೀತಿ ಆಯೋಗದ ಸಭೆ ನಡೆಯಲಿದ್ದು, ಅದರಲ್ಲಿ ಮಮತಾ ಬ್ಯಾನರ್ಜಿ ಪಾಲ್ಗೊಳ್ಳುವರು.

Leave a Reply