ರಾಷ್ಟ್ರ ವಿರೋಧಿ ಶಕ್ತಿಗಳು ದೇಶದಲ್ಲಿ ಧ್ವೇಷ ಮತ್ತು ಹಿಂಸಾಚಾರ ಪಸರಿಸುತ್ತಿವೆ: ಸೋನಿಯಾ ಗಾಂಧಿ

ಹೊಸದಿಲ್ಲಿ: ರಾಷ್ಟ್ರ ವಿರೋಧಿ ಶಕ್ತಿಗಳು ದೇಶದಲ್ಲಿ ದ್ವೇಷ ಮತ್ತು ಹಿಂಸಾಚಾರದ ವಿಷ ಹರಡುತ್ತಿದೆ ಮತ್ತು ಪ್ರಜಾಪ್ರಭುತ್ವದ ಮೇಲೆ ಸರ್ವಾಧಿಕಾರದ ಪ್ರಭಾವ ಹೆಚ್ಚಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಹೇಳಿದ್ದಾರೆ. ಹೊಸ ಚತ್ತೀಸ್‌ಗಢ ಅಸೆಂಬ್ಲಿ ಕಟ್ಟಡದ ಭೂಮಿಪೂಜೆ ಸಮಾರಂಭದಲ್ಲಿ ಅವರು ಮಾತನಾಡಿದ್ದು, ಸಮಾರಂಭದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಸೇರಿದಂತೆ ಕಾಂಗ್ರೆಸ್ ಹಿರಿಯ ಮುಖಂಡರು ಉಪಸ್ಥಿತರಿದ್ದರು.

ಸ್ವಾತಂತ್ರ್ಯ ಬಂದಾಗಿನಿಂದ ನಾವು ಬಹಳ ದೂರ ಸಾಗಿದ್ದೇವೆ. ನಾವು ಅನೇಕ ಸಮಸ್ಯೆಗಳನ್ನು ಎದುರಿಸಿದ್ದೇವೆ ಮತ್ತು ಅವುಗಳನ್ನು ಪರಿಹರಿಸುವಲ್ಲಿ ಯಶಸ್ವಿಯಾಗಿದ್ದೇವೆ ಆದರೆ ನಮ್ಮ ಪೂರ್ವಜರ ಕನಸುಗಳ ಹಿಂದೆ ನಾವು ಇದ್ದೇವೆ… ಕಳೆದ ಕೆಲವು ವರ್ಷಗಳಲ್ಲಿ, ನಮ್ಮ ದೇಶವನ್ನು ಹಳಿ ತಪ್ಪಿಸುವ ಪ್ರಯತ್ನಗಳು ನಡೆದಿವೆ.

ಇಂದು ದೇಶವು ಒಂದು ಅಡ್ಡಹಾದಿಯಲ್ಲಿದೆ. ಬಡ ವಿರೋಧಿ ಮತ್ತು ರಾಷ್ಟ್ರ ವಿರೋಧಿ ಶಕ್ತಿಗಳು ಜನರನ್ನು ಪರಸ್ಪರ ಹೋರಾಡುವಂತೆ ಮಾಡುತ್ತಿವೆ ಮತ್ತು ದೇಶದಲ್ಲಿ ದ್ವೇಷ ಮತ್ತು ಹಿಂಸಾಚಾರದ ವಿಷವನ್ನು ಹರಡುತ್ತಿವೆ ಎಂದು ಸೋನಿಯಾ ಹೇಳಿದ್ದಾರೆ.

 
 
 
 
 
 
 
 
 
 
 

Leave a Reply