ಸಂಸದ ತೇಜಸ್ವಿ ಸೂರ್ಯ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ

ಹೊಸದಿಲ್ಲಿ: ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರನ್ನು ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಬಿಜೆಪಿ ಘೋಷಣೆ ಮಾಡಿದೆ. ಸಚಿವ ಸಿಟಿ ರವಿ ಅವರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಚತುರ ವಾಗ್ಮಿಯಾಗಿ ದೇಶದ ಜನರ ಗಮನ ಸೆಳೆದಿರುವ ಯುವ ಸಂಸದ ತೇಜಸ್ವಿ ಸೂರ್ಯ ಅವರು ಹೊಸ ಜವಾಬ್ದಾರಿ ಯ ಮೂಲಕ ರಾಷ್ಟ್ರರಾಜಕಾರಣದಲ್ಲಿ ಸಕ್ರಿಯವಾಗಿರಲಿದ್ದಾರೆ. ಒಬಿಸಿ ಮೋರ್ಚಾದ ಅಧ್ಯಕ್ಷರಾಗಿ ತೆಲಂಗಾಣದ ಡಾ.ಕೆ. ಲಕ್ಷ್ಮಣ್ ಮತ್ತು ರಾಷ್ಟ್ರೀಯ ವಕ್ತಾರರಾಗಿ ಉತ್ತರಾಖಂಡ್ ನ ಅನಿಲ್ ಬಲುನಿ, ಸಂಜಯ್ ಮಯೂಖ್, ಡಾ.ಸಂಬಿತ್ ಪಾತ್ರ, ಡಾ. ಸುಧಾಂಶು ತ್ರಿವೇದಿ, ಡಾ. ಸಯೀದ್ ಶಾನವಾಜ್ ಹುಸೇನ್ ಅವರನ್ನು ಆಯ್ಕೆ ಮಾಡಲಾಗಿದೆ.

 
 
 
 
 
 
 
 
 
 
 

Leave a Reply