ಅಪಘಾತವಾಗಿದ್ದ ಬಾಲಾಸೋರ್​ನ ರೈಲು ಮಾರ್ಗ ಪುನರಾರಂಭ

ಒಡಿಶಾ: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಅಪರೂಪದ ಆಘಾತಕಾರಿ ರೈಲು ದುರಂತದಿಂದಾಗಿ ಸುಮಾರು 288ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು 900ಕ್ಕೂ ಹೆಚ್ಚು ಜನರು ಗಾಯಾಳುಗಳಾಗಿದ್ದರು. ಇದೀಗ ಎಕ್ಸ್​ಪ್ರೆಸ್​ವೇ ದುರಸ್ತಿಗೊಂಡಿದ್ದು ಪ್ಯಾಸೆಂಜರ್​ ರೈಲುಗಳು ಸಂಚರಿಸಲು ಪ್ರಾರಂಭ
ಮಾಡಿವೆ.
ನಿನ್ನೆಯಷ್ಟೇ ಕೇಂದ್ರ ರೈಲ್ವೇ ಇಲಾಖೆ ಸಚಿವ ಅಶ್ವಿನಿ ವೈಷ್ಣವ್ ಟ್ವೀಟ್​ ಮಾಡಿ ಗೂಡ್ಸ್ ರೈಲು ಸಂಚಾರ ಆರಂಭವಾಗಿದ್ದ ಮಾಹಿತಿಯನ್ನು ಜನರೊಂದಿಗೆ ಹಂಚಿಕೊಂಡಿದ್ದರು. ಅದರೊಂದಿಗೆ “ರೈಲ್ವೆ ಅಧಿಕಾರಿಗಳು ಮತ್ತು ಸಿಬ್ಬಂದಿಯ ಅವಿರತ ಶ್ರಮದಿಂದ ಹಾನಿಗೊಳಗಾಗಿದ್ದ ಮಾರ್ಗವನ್ನು ಬೇಗ ದುರಸ್ತಿ ಮಾಡಲಾಗಿದೆ” ಎಂದು ಸಚಿವ ಅಶ್ವಿನಿ ವೈಷ್ಣವ್ ಟ್ವಿಟ್ ಮೂಲಕ ತಿಳಿಸಿದ್ದರು.

 

Leave a Reply