ದೇಶದ ಮೊದಲ ವಾಟರ್ ಮೆಟ್ರೋಗೆ ಚಾಲನೆ

2 ದಿನಗಳ ಕೇರಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಿರುವನಂತಪುರಂ ಹಾಗೂ ಕಾಸರಗೋಡು ನಡುವೆ ಸಂಚರಿಸುವ ರಾಜ್ಯದ ಮೊದಲ ವಂದೇ ಭಾರತ್ ರೈಲಿಗೆ ಹಾಗೂ ದೇಶದ ಮೊದಲ ವಾಟರ್ ಮೆಟ್ರೋಗೆ ಚಾಲನೆ ನೀಡಿದ್ದಾರೆ.

ಕೊಚ್ಚಿಯಲ್ಲಿ ಪ್ರಾರಂಭವಾಗಿರುವ ನೀರಿನ ಮೆಟ್ರೋ ಯೋಜನೆ ಕೊಚ್ಚಿ ಮತ್ತು ಸುತ್ತಮುತ್ತಲಿನ ಊರಿನ ಜನರಿಗೆ ಸುರಕ್ಷಿತ ಹಾಗೂ ಕೈಗೆಟಕುವ ದರದಲ್ಲಿ ಪ್ರಯಾಣವನ್ನು ಒದಗಿಸಲಿದೆ. ಇದು ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ. ನೀರಿನ ಮೆಟ್ರೋ ಯೋಜನೆ ಮೊದಲ ಹಂತದಲ್ಲಿ 2 ಮಾರ್ಗಗಳಲ್ಲಿ 8 ವಿದ್ಯುತ್ ಹೈಬ್ರಿಡ್ ದೋಣಿಗಳೊಂದಿಗೆ ನೌಕಾಯಾನವನ್ನು ಪ್ರಾರಂಭಿಸುತ್ತದೆ. ಹೈಕೋರ್ಟ್‌ನಿಂದ ವೈಪಿನ್‌ವರೆಗಿನ ಏಕಮುಖ ಪ್ರಯಾಣಕ್ಕೆ 20 ರೂ. ಇದ್ದು, ವೈಟ್ಟಿಲದಿಂದ ಕಾಕ್ಕನಾಡು ಮಾರ್ಗಕ್ಕೆ 30 ರೂ. ನಿಗದಿಪಡಿಸಲಾಗಿದೆ.

ವಾಟರ್ ಮೆಟ್ರೋ ಯೋಜನೆಯ ಒಟ್ಟು ವೆಚ್ಚ 1,137 ಕೋಟಿ ರೂ.ಯದ್ದಾಗಿದೆ. ಕೊಚ್ಚಿಯ ಪೋರ್ಟ್ ಸಿಟಿಯ ಸುತ್ತಲಿನ 10 ದ್ವೀಪಗಳ ಸುತ್ತ ಈ ಮೆಟ್ರೋ ಸಂಚಾರ ಮಾಡಲಿದೆ. 38 ಟರ್ಮಿನಲ್‌ಗಳ ಮೂಲಕ ಪ್ರಯಾಣಿಕರಿಗೆ ಸೇವೆ ನೀಡಲಿದೆ. ಈ ವಾಟರ್ ಮೆಟ್ರೋ ಯೋಜನೆಯು 78 ಕಿ.ಮೀ. ವ್ಯಾಪಿಸಿದ್ದು ಇಲ್ಲಿನ ದ್ವೀಪಗಳಲ್ಲಿ ವಾಸಿಸುವ ಒಂದು ಲಕ್ಷಕ್ಕೂ ಹೆಚ್ಚು ಜನರಿಗೆ ಅನುಕೂಲವಾಗಲಿದೆ. ಈ ವಾಟರ್ ಮೆಟ್ರೋ ರಬ್ಬರ್ ಟೈರ್ಡ್ ಎಲೆಕ್ಟ್ರಿಕ್ ಬೋಗಿಗಳನ್ನು ಹೊಂದಿದ್ದು, ಇದನ್ನು ಮಹಾರಾಷ್ಟ್ರದ ನಾಸಿಕ್‌ನಲ್ಲಿ ತಯಾರು ಮಾಡಲಾಗಿದೆ.

 
 
 
 
 
 
 
 
 
 
 

Leave a Reply