Janardhan Kodavoor/ Team KaravaliXpress
28.6 C
Udupi
Thursday, August 11, 2022
Sathyanatha Stores Brahmavara

ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಸತ್ಯಕ್ಕೆ ಸಂದ ಜಯ: ಯಶ್ ಪಾಲ್ ಸುವರ್ಣ

ಬಾಬರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯವು ಇಂದು ನೀಡಿದ ತೀರ್ಪು ಐತಿಹಾಸಿಕವಾಗಿದೆ ಮತ್ತು “ಸತ್ಯಕ್ಕೇ ಜಯ” ಎಂಬ ಶ್ರೀ ರಾಮನ ಧ್ಯೇಯವಾಖ್ಯಕ್ಕೆ ಪೂರಕವಾಗಿ ಬಂದಿರುವ ತೀರ್ಪು ಸ್ವಾಗತಾರ್ಹ ಎಂದು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಯಶ್ ಪಾಲ್ ಸುವರ್ಣ ಹರ್ಷ ವ್ಯಕ್ತಪಡಿಸಿದ್ದಾರೆ.

ಸತ್ಯ ಎಂದಿಗೂ ಸತ್ಯವೇ, ಈಗ ಈ ತೀರ್ಪು ನಮ್ಮ ನಂಬಿಕೆಯನ್ನು ಸಾಕ್ಷಾತ್ಕರಿಸಿದಂತಾಗಿದೆ. ನಮ್ಮ ಹಿರಿಯ ಮುತ್ಸದ್ಧಿ ನಾಯಕರಾದ ಅಡ್ವಾಣಿ, ಮುರಳಿ ಮನೋಹರ ಜೋಶಿ, ಕಲ್ಯಾಣ್‍ಸಿಂಗ್, ಉಮಾ ಭಾರತಿ, ವಿನಯ್ ಕಟಿಯಾರ್ ಮುಂತಾದವರನ್ನು ಈ ಪ್ರಕರಣದ ಷಡ್ಯಂತ್ರದಲ್ಲಿ ಸಿಲುಕಿಸುವ ದೊಡ್ಡ ರಾಜಕೀಯ ಹುನ್ನಾರವೇ ನಡೆದಿತ್ತು.  ಆದರೆ ಈ ನ್ಯಾಯನಿರ್ಣಯದಿಂದಾಗಿ ಪಟ್ಟಭದ್ರರಿಗೆ ಮುಖಭಂಗವಾಗಿದೆ.  

ಈ ಎಲ್ಲಾ ಹಿರಿಯ ಮುಖಂಡರಿಗೆ ವಿನಾಕಾರಣ ಮಾನಸಿಕ ಕಿರುಕುಳ ನೀಡುವ ಉದ್ದೇಶ ಹೊಂದಿದ್ದ ಕೆಲವು ರಾಜಕೀಯ ಶಕ್ತಿಗಳಿಗೆ ನಮ್ಮ ನ್ಯಾಯಾಂಗ ವ್ಯವಸ್ಥೆಯು ತಕ್ಕ ಶಾಸ್ತಿ ಮಾಡಿದೆ. ಅದೇ ರೀತಿ ಇತ್ತೀಚೆಗೆ ರಾಮಮಂದಿರದ ನಿರ್ಮಾಣಕ್ಕೆ ಅನುಮತಿ ನೀಡಿದ ಮತ್ತು ಈಗ ಬಾಬ್ರಿ ಮಸೀದಿ ಧ್ವಂಸಕ್ಕೆ ಸಂಬಂಧಿಸಿ ನೀಡಲಾದ ತೀರ್ಪುಗಳು “ರಾಮರಾಜ್ಯ”ದ ಪರಿಕಲ್ಪನೆಗೆ ಶಕ್ತಿತುಂಬಿದೆ.

ಪವಿತ್ರವಾದ ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರವನ್ನು ನಿರ್ಮಿಸಬೇಕೆಂಬ ನಿಟ್ಟಿನಲ್ಲಿ ಅನೇಕ ಮುಖಂಡರು, ಸಾಧು ಸಂತರು, ಕರಸೇವಕರು, ಶ್ರೀ ರಾಮನ ಭಕ್ತರು ಮತ್ತು ಬಿಜೆಪಿಯ ಸಮಸ್ತರೂ ಹಲವು ವರ್ಷಗಳಿಂದ ಹೋರಾಟ, ತ್ಯಾಗ ಬಲಿದಾನಗಳನ್ನು ಕೈಗೊಂಡಿದ್ದರು.

ಈ ಎಲ್ಲಾ ಹೋರಾಟಗಳಿಗೆ ಈ ತೀರ್ಪಿನಿಂದಾಗಿ ಮತ್ತೊಮ್ಮೆ ಮೌಲ್ಯ ಹೆಚ್ಚಿದಂತಾಗಿದೆ. ಅತ್ಯಂತ ಸಹನೆಯಿಂದ, ಅಧ್ಯಯನಗಳಿಂದ ಈ ಐತಿಹಾಸಿಕ ತೀರ್ಪು ಹೊರಹೊಮ್ಮಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!