ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡು ಅಂಗದಾನದ ಮೂಲಕ ಸಾರ್ಥಕತೆ ಮೆರೆದ ದಾನಿ

ಮಣಿಪಾಲ, 11ನೇ ಜೂನ್ 2022: 38 ವರ್ಷದ ಶ್ರೀ ನವೀನರವರಿಗೆ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆ ಬಳಿ 08.06.2022 ರಂದು ರಾತ್ರಿ 10.00 ಗಂಟೆಗೆ ರಸ್ತೆ ಅಪಘಾತ ಸಂಭವಿಸಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ದಿನಾಂಕ 9.06.2022ರಂದು ಬೆಳಿಗ್ಗೆ 9.50. ಕ್ಕೆ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು . ಶ್ರೀಮತಿ ಮಲ್ಲಿಕಾ ಇವರ ಪತಿಯಾದ ಶ್ರೀ ನವೀನ ಅವರು ಅಪಘಾತದ ಪರಿಣಾಮದಿಂದ ತೀವ್ರತರವಾದ ಗಾಯವನ್ನು ಹೊಂದಿದ್ದರು.

ನಮ್ಮ ವೈದ್ಯರು ಶ್ರೀ ನವೀನ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ, ಅವರು ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಂಡುಬರಲಿಲ್ಲ . ಮಾನವ ಅಂಗಾಂಗ ಕಸಿ ಕಾಯ್ದೆ 1994 ರ ಅನುಸಾರ ಶ್ರೀ ನವೀನ್ ಅವರನ್ನು 6 ಗಂಟೆಗಳ ಅಂತರದಲ್ಲಿ ಎರಡು ಬಾರಿ ಪರಿಶೀಲಿಸಿ, ಅಧಿಕೃತವಾಗಿ ಪರಿಣಿತ ವೈದ್ಯರ ತಂಡವು ರೋಗಿಯ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಿದರು. ಮೊದಲನೆಯದು 10.06.2022 ರಂದು ಸಂಜೆ 5.00ಕ್ಕೆ ಮತ್ತು ಎರಡನೆಯದು 10.06.2022 ರಂದು ರಾತ್ರಿ 11.35 ಕ್ಕೆ ತರುವಾಯ, ಶ್ರೀ ನವೀನ್ ಅವರ ಪತ್ನಿ ಶ್ರೀಮತಿ ಮಲ್ಲಿಕಾ ಮತ್ತು ಅವರ ಕುಟುಂಬ ಸದಸ್ಯರು ಇತರ ರೋಗಿಗಳ ಜೀವ ಉಳಿಸಲು ಕಾರ್ಯಸಾಧ್ಯವಾದ ಅಂಗಗಳನ್ನು ದಾನ ಮಾಡಲು ತಮ್ಮ ಇಚ್ಛೆಯನ್ನು ವ್ಯಕ್ತಪಡಿಸಿದರು. ಎರಡು ಮೂತ್ರಪಿಂಡಗಳು, ಯಕೃತ್ತು, ಚರ್ಮ ಮತ್ತು ಎರಡು ಕಾರ್ನಿಯಾಗಳು/ಕಣ್ಣುಗುಡ್ಡೆಗಳನ್ನು ತೆಗೆದು 6 ಜನರ ಜೀವ ಉಳಿಸಲು ಸಹಾಯವಾಗಿದೆ.

ಜೀವನಸಾರ್ಥಕತೆ ಪ್ರೋಟೋಕಾಲ್ಗಳು ಮತ್ತು ನಿರ್ಧಾರಗಳ ಪ್ರಕಾರ, ನೋಂದಾಯಿತ ರೋಗಿಗಳಿಗೆ ಎರಡು ಕಾರ್ನಿಯಾಗಳು ಮತ್ತು ಒಂದು ಮೂತ್ರಪಿಂಡ ಮತ್ತು ಚರ್ಮ ವನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರೋಗಿಗಳಿಗೆ ಬಳಸಲಾಯಿತು. ಯಕೃತ್ತು ಮತ್ತು ಒಂದು ಕಿಡ್ನಿ ಯನ್ನು ಕೆ ಎಂ ಸಿ ಆಸ್ಪತ್ರೆ ಅಂಬೇಡ್ಕರ್ ಸರ್ಕಲ್ ಮಂಗಳೂರಿಗೆ ಕಳುಹಿಸಿಕೊಡಲಾಯಿತು.

ನವೀನ್ ಅವರ ಪತ್ನಿ ಮತ್ತು ಕುಟುಂಬ ಸದಸ್ಯರು “ಅಂಗದಾನ ಒಂದು ಪುಣ್ಯದ ಕೆಲಸ. ನವೀನ್ ಅಂಗದಾನ ಮಾಡಿ ತನ್ನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ ” ಎಂದು ತಿಳಿಸಿದ್ದಾರೆ.  

ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ “ಜೀವ ಉಳಿಸುವ ನಿಟ್ಟಿನಲ್ಲಿ ಅಂಗದಾನ ಶ್ರೇಷ್ಟವಾದ ಕೆಲಸವಾಗಿದ್ದು, ಅತ್ಯಂತ ಮಹತ್ವವನ್ನು ಪಡೆದಿದೆ. ಜನರು ಈ ರೀತಿಯ ಉತ್ತಮ ಕಾರ್ಯಗಳಿಗೆ ಪ್ರೋತ್ಸಾಹಿಸಬೇಕು” ಎಂದು ತಿಳಿಸಿ ಅಂಗ ದಾನ ಮಾಡಲು ನಿರ್ಧರಿಸಿದ ಶ್ರೀನಿವಾಸ್ ಕುಟುಂಬಕ್ಕೆ ಕ್ರತಜ್ಞತೆ ಸಲ್ಲಿಸಿದರು. “ಅಂಗಾಂಗ ದಾನದ ಬಗ್ಗೆ ಸಾರ್ವಜನಿಕರಲ್ಲಿ ದಿನದಿಂದ ದಿನಕ್ಕೆ ಜಾಗೃತಿ ಹೆಚ್ಚಾಗುತ್ತಿರುವುದು ಒಳ್ಳೆಯ ಸಂಗತಿ.” ಎಂದು ಅಭಿಪ್ರಾಯಪಟ್ಟರು. 

 ದಾನ ಮಾಡಿದ ಅಂಗಗಳನ್ನು ಉಡುಪಿ ಮತ್ತು ದಕ್ಷಿಣ ಕನ್ನಡ ಪೊಲೀಸ್ ಇಲಾಖೆಯ ಬೆಂಬಲದೊಂದಿಗೆ ಮಣಿಪಾಲದಿಂದ ಮಂಗಳೂರಿಗೆ ಗ್ರೀನ್ ಕಾರಿಡಾರ್ ಮೂಲಕ ಸ್ವೀಕರಿಸುವ ಆಸ್ಪತ್ರೆಗೆ ವರ್ಗಾಯಿಸಲಾಯಿತು.

 

 
 
 
 
 
 
 
 
 

Leave a Reply