ಯುವ ಶಕ್ತಿಯ ಸದ್ಬಳಕೆ ಮಾಡಿಕೊಳ್ಳಿ : ಜಿಲ್ಲಾಧಿಕಾರಿ ಜಿ.ಜಗದೀಶ್​ 

ಉಡುಪಿ,: ​ಜಿಲ್ಲೆಯ ಯುವಕ ಸಂಘಗಳಲ್ಲಿನ ಯುವಕರಿಗೆ ವೈವಿಧ್ಯಮಯ​ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮತ್ತು ಅವರಿಗೆ ಅಗತ್ಯ ತರಬೇತಿಗಳನ್ನು ನೀಡುವ ಮೂಲಕ, ಅವರಲ್ಲಿರುವ​ ಯುವಶಕ್ತಿಯನ್ನು ಜಿಲ್ಲೆಯ ಅಭಿವೃಧ್ದಿ ಕಾರ್ಯಗಳಿಗೆ ಬಳಸಿಕೊಳ್ಳುವಂತಹ ಕಾರ್ಯಕ್ರಮಗಳನ್ನು ರೂಪಿಸುವಂತೆ​ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಅವರು ಸೋಮವಾರ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ನೆಹರು ಯುವಕೇಂದ್ರದ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೆಹರು ಯುವಕೇಂದ್ರದ ಮೂಲಕ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಯುವಕ ಸಂಘಗಳ ಸದಸ್ಯರಿಗೆ ಅವರಲ್ಲಿನ​ ಸಮಾಜಸೇವೆಯ ಗುಣ, ಕೌಶಲ್ಯ ಮತ್ತು ಸಾಹಸ ಪ್ರವೃತ್ತಿಯನ್ನು ಅಭಿವೃದ್ಧಿಗೊಳಿಸುವಂತೆ ಚಟುವಟಿಕೆಗಳನ್ನು​ ಏರ್ಪಡಿಸಿ. ಯುವಕ ಯುವತಿಯರಿಗೆ ವಿಕೋಪ ನಿರ್ವಹಣೆ ಸೇರಿದಂತೆ ಅತ್ಯಾವಶ್ಯಕ ಸಂದರ್ಭದಲ್ಲಿ ಜಿಲ್ಲಾಡಳಿತ ಮತ್ತು​ ಸಮಾಜದ ನೆರವಿಗೆ ಧಾವಿಸುವಂತಹ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿ, ತುರ್ತು ಸಂದರ್ಭದಲ್ಲಿ ಈ ರೀತಿಯ​ ತರಬೇತಿ ಪಡೆದ ಯುವಕರ ಸೇವೆಯನ್ನು ಜಿಲ್ಲಾಡಳಿತದ ನೆರವಿಗೆ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.​​

ನೆಹರು ಯುವ ಕೇಂದ್ರ​ದಿಂದ ಸಿದ್ಧಪಡಿಸುವ ವಾರ್ಷಿಕ ಕಾರ್ಯಕ್ರಮಗಳಲ್ಲಿ, ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ​ ಯುವಕರು ತೊಡಗುವಂತಹ ಕಾರ್ಯಕ್ರಮಗಳನ್ನು ರೂಪಿಸಿ, ಉತ್ತಮವಾಗಿ ಕಾರ್ಯನಿರ್ವಹಿಸುವ ಯುವ ತಂಡಗಳನ್ನು​ ಸೂಕ್ತ ರೀತಿಯಲ್ಲಿ ಪ್ರೋತ್ಸಾಹಿಸಿ, ಯುವಕರಲ್ಲಿ ಆತ್ಮ ವಿಶ್ವಾಸ ಮೂಡಿಸುವಂತಹ ತರಬೇತಿಗಳು, ಸ್ಪರ್ಧಾತ್ಮಕ​ ಪರೀಕ್ಷೆಗಳನ್ನು ಎದುರಿಸಲು ಅಗತ್ಯವಾದ ತರಬೇತಿ, ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸು​ ​ವಂತಹ​ ತರಬೇತಿಗಳು, ತಮ್ಮ ಗ್ರಾಮಗಳಲ್ಲಿ ಸ್ವಚ್ಚತಾ ಕಾರ್ಯಕ್ರಮ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ​ ಸಾರ್ವಜನಿಕರಿಗೆ ಅರಿವು ಮೂಡಿಸಿ, ಆ ಸೌಲಭ್ಯಗಳನ್ನು ಜನರಿಗೆ ದೊರಕಿಸುವ ಕಾರ್ಯಕ್ರಮ ಮತ್ತು ಯುವಕರ ಕ್ರೀಡಾ​ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಬೆಳವಣಿಗೆಗೆ ಪೂರಕವಾಗುವಂತ ಯೋಜನೆಗಳನ್ನು ರೂಪಿಸುವಂತೆ ಜಿಲ್ಲಾಧಿಕಾರಿ​ ಸೂಚಿಸಿದರು.

ಜಿಲ್ಲೆಯಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿರುವ ಯುವ ಸಂಘಗಳ ಮಾಹಿತಿಯನ್ನು​ ಸಿದ್ಧಪಡಿಸಿಟ್ಟುಕೊಂಡು, ತುರ್ತು ಸಂದರ್ಭದಲ್ಲಿ ಅವರ ನೆರವು ಪಡೆಯಬೇಕು. ಯುವ ಜನತೆ ಮೊಬೈಲ್ ಮತ್ತು​ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯರ್ಥವಾಗಿ ಕಾಲ ಕಳೆಯದೇ, ಸಾಮಾಜಿಕ ಕಾರ್ಯಗಳಿಂದ ಸಮಾಜಕ್ಕೆ ಅಗತ್ಯ ನೆರವು​ ನೀಡಬೇಕು. ಯುವಕರು ಸದಾ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗಿಕೊಂಡು, ತಮ್ಮಲ್ಲಿನ ಯುವಶಕ್ತಿಯ ಮೂಲಕ​ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ತುರ್ತು ಸಂದರ್ಭಗಳಲ್ಲಿ ಜಿಲ್ಲಾಡಳಿತ ನೀಡುವ ಕರೆಗೆ ತಕ್ಷಣ​ ಸ್ಪಂದಿಸಬೇಕು ಎಂದು ಡಿಸಿ ಜಿ.ಜಗದೀಶ್ ಹೇಳಿದರು.

ಜಿಲ್ಲಾ ನೆಹರು ಯುವ ಕೇಂದ್ರದ 2020-21 ನೇ ಸಾಲಿನಲ್ಲಿ ಏರ್ಪಡಿಸಲಾಗುವ ವಾರ್ಷಿಕ ಕಾರ್ಯಕ್ರಮಗಳ ಕ್ರಿಯಾ​ ಯೋಜನೆಗೆ ಜಿಲ್ಲಾಧಿಕಾರಿ ಅನುಮೋದನೆ ನೀಡಿದರು.​ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನೆಹರು ಯುವ ಕೇಂದ್ರದ ವಿಷ್ಣುಮೂರ್ತಿ ಹಾಗೂ ವಿವಿಧ​ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.​ 

ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿ ವಿಲ್ಪೆçಡ್ ಡಿಸೋಜಾ ಸ್ವಾಗತಿಸಿ, ವಂದಿಸಿದರು.
 

 
 
 
 
 
 
 
 
 

Leave a Reply