ನೆಂಪು-ಬೀಳ್ಕೊಡುಗೆ ಕಾರ್ಯಕ್ರಮ

ಕೋಟ: ಕರ್ನಾಟಕ ಪಬ್ಲಿಕ್ ಸ್ಕೂಲ್ ವಂಡ್ಸೆ(ನೆoಪು)ಯ ಪದವಿಪೂರ್ವ ಕಾಲೇಜು ವಿಭಾಗದ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಚಂದ್ರಕಲಾ ಬಾಯಿಯವರಿಗೆ ಬೀಳ್ಕೊಡುಗೆ ಸಮಾರಂಭವು ನಡೆಯಿತು.

ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿ ಚಂದ್ರಕಲಾ ಬಾಯಿಯವರ ಸುಧೀರ್ಘ 34ವರ್ಷಗಳ ಸಾರ್ಥಕ ಸೇವೆಯನ್ನು ಸ್ಮರಿಸಿ ಸಂಸ್ಥೆಯ ಎಲ್ಲ ಬೋಧಕ ಹಾಗೂ ಬೋಧಕೇತರ ವರ್ಗದವರು ಸೇರಿ ಸನ್ಮಾನಿಸಿ, ಶುಭ ಹಾರೈಸಿದರು. ಪ್ರಾಂಶುಪಾಲ ರಾಜೀವ ನಾಯಕ ಅಧ್ಯಕ್ಷತೆ ವಹಿಸಿದ್ದರು.

Leave a Reply