2,000 ರೂ. ನೋಟು ಹಿಂಪಡೆದ ಆರ್​ಬಿಐ

ನವದೆಹಲಿ: ಎರಡು ಸಾವಿರ ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಆದರೆ, ಈ ಕರೆನ್ಸಿ ನೋಟುಗಳು ಕಾನೂನಾತ್ಮಕವಾಗಿ ಸಿಂಧುವಾಗಿ ಮುಂದುವರಿಯಲಿದೆ ಎಂದು ಆರ್​ಬಿಐ ಶುಕ್ರವಾರ ಹೇಳಿಕೆ ನೀಡಿದೆ. 

2,000 ರೂ. ನೋಟು ಹೊಂದಿರುವವರು ಅದನ್ನು ಮರಳಿಸಲು ಸಮಯಾವಕಾಶ ಕೊಡಲಾಗುತ್ತದೆ. ಆರ್​ಬಿಐ ನೀಡಿರುವ ಮಾಹಿತಿ ಪ್ರಕಾರ 2023 ಸೆಪ್ಟಂಬರ್ 30ರೊಳಗೆ 2,000 ಮುಖಬೆಲೆಯ ನೋಟು ಗಳನ್ನು ವಾಪಸ್ ಕೊಟ್ಟು ವಿನಿಮಯ ಮಾಡಿಕೊಳ್ಳ ಬಹುದು.

 
 
 
 
 
 
 
 
 
 
 

Leave a Reply