ಕನ್ನಡದ ಹಿರಿಯ ನಟಿ ಭಾರ್ಗವಿ ನಾರಾಯಣ್ (84) ನಿಧನ

ಬೆಂಗಳೂರು: ಕನ್ನಡದ ಹಿರಿಯ ನಟಿ ಭಾರ್ಗವಿ ನಾರಾಯಣ್ (84) ಅವರು ಸೋಮವಾರ ಸಂಜೆ 7:30ಕ್ಕೆ ನಿಧನರಾದರು.
ಸಿನಿಮಾ, ಕಿರುತೆರೆ ಹಾಗೂ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದ ಭಾರ್ಗವಿ ನಾರಾಯಣ್‌ ಅವರು ಸಹಜ ಅಭಿನಯದಿಂದ ಗುರುತಿಸಿಕೊಂಡವರು. ಅವರ ಸಾವಿನ ಕುರಿತು ಅವರ ಮೊಮ್ಮಗಳು, ನಟಿ ಸಂಯುಕ್ತಾ ಹೊರನಾಡು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಎರಡು ಕನಸು, ಹಂತಕರ ಸಂಚು, ಪಲ್ಲವಿ ಅನುಪಲ್ಲವಿ, ಬಾ ನಲ್ಲೆ ಮಧುಚಂದ್ರಕೆ, ವಂಶವೃಕ್ಷ, ಪ್ರೊಫೆಸರ್‌ ಹುಚ್ಚುರಾಯ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. 2019ರಲ್ಲಿ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ಭಾರ್ಗವಿ ಅವರು 600ಕ್ಕೂ ಹೆಚ್ಚು ನಾಟಕಗಳ ಪ್ರದರ್ಶನ ನೀಡಿದ್ದಾರೆ.
ರಂಗಭೂಮಿಯಲ್ಲಿ ‘ಮೇಕಪ್‌ ನಾಣಿ’ ಎಂದೇ ಹೆಸರಾಗಿದ್ದ ಬೆಳವಾಡಿ ನಂಜುಡಯ್ಯ ನಾರಾಯಣ ಅವರು ಭಾರ್ಗವಿ ಅವರ ಪತಿ. ದಂಪತಿಗೆ ನಟರಾದ ಪ್ರಕಾಶ್ ಬೆಳವಾಡಿ, ಸುಧಾ ಬೆಳವಾಡಿ ಸೇರಿ ನಾಲ್ವರು ಮಕ್ಕಳು.

ಭಾರ್ಗವಿ ಅವರು ಬಿಎಸ್ಸಿ ಮತ್ತು ಇಂಗ್ಲಿಷ್‌ ಎಂಎ ಸ್ನಾತಕೋತ್ತರ ಪದವಿ ಪಡೆದಿದ್ದರು. ಅವರು ‘ನಾ ಕಂಡ ನಮ್ಮವರು’ ಕೃತಿ ರಚಿಸಿದ್ದರು.

 
 
 
 
 
 
 
 
 
 
 

Leave a Reply