ಕೋವಿಡ್ ಲಸಿಕೆ : ಆನ್‌ಲೈನ್ ನೋಂದಣಿ ಕಡ್ಡಾಯವಲ್ಲ

Coronavirus COVID-19 single dose small vials and multi dose in scientist hands concept. Research for new novel corona virus immunization drug.
ಬೆಂಗಳೂರು: ಕೋವಿಡ್ ಲಸಿಕೆ ಪಡೆಯಲು ಆನ್‌ಲೈನ್ ನೋಂದಣಿ ಕಡ್ಡಾಯವಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಆದೇಶ ಹೊರಡಿಸಿದೆ.
ಆನ್‌ಲೈನ್ ನೋಂದಣಿ ಸಮಸ್ಯೆ ಹಿನ್ನೆಲೆ ಗ್ರಾಮೀಣ ಭಾಗದ ಜನರಿಗೆ ವ್ಯಾಕ್ಸಿನೇಷನ್ ಆಗಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು. 

ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಈ ನಿರ್ಧಾರ ಪ್ರಕಟಿಸಿದೆ. ಈ ಆದೇಶದನ್ವಯ 18 ವರ್ಷ ಮೇಲ್ಪಟ್ಟವರು ಸಮೀಪದ ಲಸಿಕಾ ಕೇಂದ್ರಕ್ಕೆ ತೆರಳಿ ವ್ಯಾಕ್ಸಿನ್ ಪಡೆದುಕೊಳ್ಳುವ ಅವಕಾಶ ಕಲ್ಪಿಸಲಾಗಿದೆ. 

ಲಸಿಕಾ ಕೇಂದ್ರದಲ್ಲಿಯೇ ನೋಂದಣಿ ವ್ಯವಸ್ಥೆ ಇರಲಿದೆ. ಜನರು ನೇರವಾಗಿ ನೋಂದಣಿ ಮಾಡಿಸಿಕೊಂಡು ಅದೇ ದಿನ ಲಸಿಕೆ ಪಡೆಯಬಹುದಾಗಿದೆ.

 
 
 
 
 
 
 
 
 
 
 

Leave a Reply