ಇಂದು ಪರ್ಯಾಯ ಶ್ರೀ ಅದಮಾರು ಮಠಾಧೀಶರಿಗೆ ನಾಗರಿಕ ಅಭಿವಂದನಾ ಸಮಾರಂಭ

ಉಡುಪಿ : ಶ್ರೀ ಕೃಷ್ಣಾಪುರ ಪರ್ಯಾಯೋತ್ಸವ ಸಮಿತಿ ವತಿಯಿಂದ ಇಂದು ಸೋಮವಾರ ಸಂಜೆ 6.30 ಕ್ಕೆ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಗೆ ನಾಗರಿಕ ಅಭಿವಂದನಾ ಕಾರ್ಯಕ್ರಮ‌ ನಡೆಯಲಿದೆ.

ಭಾವೀ ಪರ್ಯಾಯ ಶ್ರೀ ಕೃಷ್ಣಾಪುರ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ರಾಜ್ಯದ ಸಚಿವ ಕೋಟ ಶ್ರೀನಿವಾಸ ಪೂಜಾರಿಯ ಮುಖ್ಯ ಅಭ್ಯಾಗತರಾಗಿರುತ್ತಾರೆ. ಪ್ರಸಿದ್ಧ ವಿದ್ವಾಂಸ ಕೃಷ್ಣರಾಜ ಕುತ್ಪಾಡಿ ಅಭಿವಂದನಾ ಭಾಷಣ ಮಾಡಲಿದ್ದಾರೆ. 

ಪರ್ಯಾಯೋತ್ಸವ ಸಮಿತಿ ಗೌರವಾಧ್ಯಕ್ಷ ಸೂರ್ಯನಾರಾಯಣ ಉಪಾಧ್ಯಾಯ, ಕಾರ್ಯಾಧ್ಯಕ್ಷ ಕೆ ರಘುಪತಿ ಭಟ್ ಉಪಸ್ಥಿತರಿರುತ್ತಾರೆ ಎಂದು ಸಮಿತಿ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply