ಕೋಟ ಪಡುಕರೆ- ಲ.ಸೋ.ಬ.ಸ.ಪ್ರ ಕಾಲೇಜು ವಾರ್ಷಿಕೋತ್ಸವ

ಕೋಟ: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಹಾದಿ ತುಳಿಯಬೇಕು ಈ ದಿಸೆಯಲ್ಲಿ ಶೈಕ್ಷಕಣಿಕವಾಗಿ ತೊಡಗಿಕೊಳ್ಳುವುದರ ಜೊತೆಗೆ ಇತರ ಕ್ಷೇತ್ರದಲ್ಲೂ ಮುಂಚೂಣಿಗೆ ತಲುಪಬೇಕು ಎಂದು ಕೋಟ ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಹೇಳಿದ್ದಾರೆ.

ಶನಿವಾರ ಕೋಟ ಪಡುಕರೆ ಲಕ್ಷ್ಮಿ ಸೋಮಬಂಗೇರ ಸರಕಾರಿ ಪ್ರಥಮದರ್ಜೆ ಕಾಲೇಜು ಇದರ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶುಭಾಶಂಸನೆಗೈದು ಮಾತನಾಡಿ ಸಂಸ್ಕಾರಯುತವಾಗಿ ನಡೆದುಕೊಳ್ಳುವುದರ ಜೊತೆಗೆ ಗುರುಹಿರಿಯರನ್ನು ಗೌರವಿಸಿ ಬದುಕುವ ಜೀವನ ಅರ್ಥಪೂರ್ಣ,ಶಿಸ್ತು ಸೌಮ್ಯತೆ ಈ ಎಲ್ಲಾ ಗುಣಗಳು ವಿದ್ಯಾರ್ಥಿಗಳಲ್ಲಿ ನೈಜವಾಗಿ ಕಾಣಬೇಕು,ಪ್ರಸ್ತುತ ಯುವ ಸಮುದಾಯ ಮುಂದಿನ ದಿನಗಳಲ್ಲಿ ದೊಡ್ಡ ಆಸ್ತಿಯಾಗಿ ಹೊರಹೊಮ್ಮಬೇಕು ಎಂದರಲ್ಲದೆ ಕಾಲೇಜು ಜೀವನದ ನಂತರ ಸ್ವಂತ ಉದ್ಯಮದ ಚಿಂತನೆ ಅತ್ಯವಶ್ಯ ಈ ನಿಟ್ಟಿನಲ್ಲಿ ಎಲ್ಲರೂ ಸಾಧನೆಯ ಶಿಖರವೆರುವಂತ್ತಾಗಲಿ ಎಂದು ಹಾರೈಸಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ಗಾಂವ್ಕರ ವಹಿಸಿ ವಾರ್ಷಿಕ ವರದಿ ಮಂಡಿಸಿದರು. ಈ ವೇಳೆ ಗೀತಾನಂದ ಫೌಂಡೇಶನ್ ವತಿಯಿಂದ ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಪುರಸ್ಕಾರ ನೀಡಲಾಯಿತು.

ಮುಖ್ಯ ಅಭ್ಯಾಗತರಾಗಿ ಸರಕಾರಿ ಪ್ರಥಮದರ್ಜೆ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ ಇದರ ಪ್ರಾಂಶುಪಾಲ ಡಾ.ಸುರೇಶ್ ರೈ.ಕೆ, ಕೋಟ ಗ್ರಾಮಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ ,ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯ ರಮೇಶ್ ಹೆಚ್ ಕುಂದರ್,ಕಾಲೇಜಿನ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಜನಾರ್ದನ ಆಚಾರ್,ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುದಿನ ಕೋಡಿ,ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಸಿಂಧೂರ.ಕೆ,ಸುಜನ್ಯ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಸುನೀತಾ ವಿ.ಸ್ವಾಗತಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಸಿಂಧು ಭಟ್ ನಿರೂಪಿಸಿದರು.

 
 
 
 
 
 
 
 
 

Leave a Reply