ಎಲ್ಲಾ ಸರಕಾರಿ ಕಚೇರಿಗಳ ಅವರಣದಲ್ಲಿ ಗಿಡ ನೆಡಲು ಕ್ರಮ : ಜಿಲ್ಲಾಧಿಕಾರಿ ಜಿ.ಜಗದೀಶ್.

ಉಡುಪಿ​:  ಜಿಲ್ಲೆಯ ಎಲ್ಲಾ ಸರಕಾರಿ ಕಚೇರಿಗಳ ಅವರಣದಲ್ಲಿ ಲಭ್ಯವಿರುವ ಸ್ಥಳಗಳಲ್ಲಿ​ ಗಿಡಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲಾ ಅಧಿಕಾರಿಗಳು ಬದ್ಧರಾಗಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್​ ಹೇಳಿದರು.

ಅಜ್ಜರಕಾಡುವಿನ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ​ ಪರಿಸರ ದಿನದ ಅಂಗವಾಗಿ ಗಿಡ ನೆಟ್ಟು ಮಾತನಾಡಿದರು.

ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಗಿಡಮರಗಳನ್ನು ಉಳಿಸಿ, ಬೆಳೆಸುವುದು ಅತ್ಯಂತ ಅವಶ್ಯಕವಾಗಿದ್ದು, ಪ್ರತಿಯೊಬ್ಬರೂ​ ತಮ್ಮ ಮನೆಗಳ ಆವರಣದಲ್ಲಿ ಗಿಡಗಳನ್ನು ನೆಟ್ಟು ಪೋಷಿಸಬೇಕು. ಸರ್ಕಾರಿ ಕಚೇರಿಗಳಲ್ಲಿ ಸಹ ಗಿಡಗಳನ್ನು ನಡೆಸುವ ಕುರಿತಂತೆ​ ಎಲ್ಲಾ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.​​

ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್,​ ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಡಿಹೆಚ್‌ಓ ಡಾ. ನಾಗಭೂಷಣ ಉಡುಪ, ಜಿಲ್ಲಾ ರೋಗ ವಾಹಕ ನಿಯಂತ್ರಣಾಧಿಕಾರಿ ಡಾ.​ ಪ್ರಶಾಂತ ಭಟ್, ತಾಲೂಕು ಆರೋಗ್ಯಾಧಿಕಾರಿ ಡಾ.ವಾಸುದೇವ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಆರೋಗ್ಯ ಇಲಾಖೆಯ​ ಅಧಿಕಾರಿಗಳಾದ ಡಾ.ಪ್ರೇಮಾನಂದ, ಡಾ.ಎಂ.ಜಿ.ರಾಮ, ಡಾ.ರಾಮರಾವ್, ಡಾ. ಚಿದಾನಂದ ಮತ್ತಿತರರು ಉಪಸ್ಥಿತರಿದ್ದರು.​​
 
 
 
 
 
 
 
 
 
 
 

Leave a Reply