ಪರ್ಕಳ ಸಣಕ್ಕಿಬೆಟ್ಟುವಿನಲ್ಲಿ ಸಾರ್ವಜನಿಕ ಸಮುದಾಯ ಭವನ ನಿರ್ಮಾಣ

ಉಡುಪಿ ವಿಧಾನಸಭಾ ಕ್ಷೇತ್ರದ ನಗರಸಭಾ ವ್ಯಾಪ್ತಿಯ ಪರ್ಕಳ ವಾರ್ಡಿನ ಸಣಕ್ಕಿಬೆಟ್ಟುವಿನಲ್ಲಿ ಸಾರ್ವಜನಿಕ ಸಮುದಾಯ ಭವನ ನಿರ್ಮಾಣಕ್ಕೆ ಸಂಭಂದಿಸಿದಂತೆ ಇಂದು ದಿನಾಂಕ 13-04-2022 ರಂದು ಶಾಸಕರಾದ ಕೆ. ರಘುಪತಿ ಭಟ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ನಗರಸಭಾ ಸದಸ್ಯರಾದ ಮಂಜುನಾಥ್ ಮಣಿಪಾಲ್ ಹಾಗೂ ಪೌರಾಯುಕ್ತರಾದ ಉದಯ್ ಶೆಟ್ಟಿ, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಯಶ್ವಂತ್, ತಹಶೀಲ್ದಾರರಾದ ಅರ್ಚನಾ ಭಟ್, ಕಂದಾಯ ನಿರೀಕ್ಷಕರಾದ ಉಪೇಂದ್ರ, ಭೂ ಮಾಪನಾಧಿಕಾಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply