ಪರ್ಯಾಯ ಸ್ವಾಗತ ಸಮಿತಿಯಿಂದ ಸಿಎಂ. ಗೆ ಆಮಂತ್ರಣ

ಉಡುಪಿ ಶ್ರೀ ಪುತ್ತಿಗೆ ಮಠದ ಪರ್ಯಾಯ ಮಹೋತ್ಸವ ಸಮಿತಿಯ ಪದಾಧಿಕಾರಿಗಳೊಂದಿಗೆ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ರವರು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಶ್ರೀ ಡಿ. ಕೆ. ಶಿವಕುಮಾರ್, ವಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನ ಸಭೆಯ ಸಭಾಪತಿ ಶ್ರೀ ಯು. ಟಿ. ಖಾದರ್, ಗೃಹ ಸಚಿವರಾದ ಶ್ರೀ ಜಿ. ಪರಮೇಶ್ವರ್, ಹಿಂದುಳಿದ ವರ್ಗಗಳ ಇಲಾಖೆ ಸಚಿವರಾದ ಶ್ರೀ ಬಸವರಾಜ ತಂಗಡಗಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಬಿ. ಕೆ ಹರಿಪ್ರಸಾದ್ ರವರನ್ನು ಭೇಟಿಯಾಗಿ ಜನವರಿಯಲ್ಲಿ ನಡೆಯಲಿರುವ ಪರ್ಯಾಯ ಮಹೋತ್ಸವದ ಆಹ್ವಾನ ಪತ್ರಿಕೆಯನ್ನು ನೀಡಿ ಉಡುಪಿಯ ಜನತೆಯ ಪರವಾಗಿ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಸುನೀಲ್ ಕುಮಾರ್, ಶ್ರೀ ಸುರೇಶ್ ಶೆಟ್ಟಿ ಗುರ್ಮೆ, ಶ್ರೀ ಕಿರಣ್ ಕುಮಾರ್ ಕೊಡ್ಗಿ, ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳಿ, ಮಾಜಿ ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಹಾಗೂ ಸಮಿತಿಯ ಪ್ರಮುಖರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply