ನಿಗದಿತ ಪಡಿಸಿದ ಸಮಯದಲ್ಲಿ ಪಟಾಕಿ ಸಿಡಿಸಿ: ಡಿಸಿ ಜಿ.ಜಗದೀಶ್

ಉಡುಪಿ : ದೀಪಾವಳಿ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಹಸಿರು ಪಟಾಕಿ ಗಳನ್ನು ಮಾತ್ರ ಮಾರಾಟಬೇಕು ಹಾಗೂ ಸಾರ್ವಜನಿಕರು ಪಟಾಕಿ ಸಿಡಿಸುವ ಸಮಯವನ್ನು ಸರ್ಕಾರದ ಅದೇಶದಂತೆ ರಾತ್ರಿ 8 ರಿಂದ 10 ರ ವರಗೆ ಮಾತ್ರ ಸಿಡಿಸಬೇಕು.

ನಿಗಧಿತ ಅವಧಿಗಿಂತ ಮುಂಚೆ ಹಾಗೂ ನಿಗಧಿತ ಅವಧಿಯ ನಂತರ ಪಟಾಕಿ ಸಿಡಿಸು ವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ, ಸುರಕ್ಷಿತ ರೀತಿಯಲ್ಲಿ ದೀಪಾವಳಿ ಹಬ್ಬವನ್ನು ಆಚರಿಸುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾರ್ವಜನಿಕರು ನಿಗಧಿತ ಅವಧಿಯಲ್ಲಿ ಮಾತ್ರ ಪಟಾಕಿ ಸಿಡಿಸಬೇಕು, ಈ ಕುರಿತ ಪರಿಶೀಲಿಸಲು ಬೀಟ್ ನಲ್ಲಿರುವ ಪೊಲೀಸ್ ಸಿಬ್ಬಂದಿಯನ್ನು ಬಳಸಿಕೊಳ್ಳುವಂತೆ ಪೊಲೀಸ್ ಇಲಾಖೆಗೆ ಮತ್ತು ಎಲ್ಲಾ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಪಟಾಕಿ ಮಳಿಗೆಗಳಲ್ಲಿ ಹಸಿರು ಪಟಾಕಿ ಮಾತ್ರ ಮಾರಾಟ ಮಾಡಬೇಕು, ನಿಷೇಧಿತ ಪಟಾಕಿಯನ್ನು ಮಾರಾಟ ಮಾಡಿದ್ದಲ್ಲಿ ಅಂತಹ ಅಂಗಡಿಗಳ ಮಾಲೀಕರ ವಿರುದ್ದ ಪ್ರಕರಣ ದಾಖಲಿಸಲಾಗುವುದು ಎಂದ ಜಿಲ್ಲಾಧಿಕಾರಿ ಜಿ.ಜಗದೀಶ್, ಮಾಲಿನ್ಯ ನಿಯಂತ್ರಣ ಮಂಡಳಿ ಯಿಂದ , ಹಬ್ಬದ ಮುಂಚೆ ಮತ್ತು ನಂತರದ ಮಾಲಿನ್ಯ ಪ್ರಮಾಣವನ್ನು ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದರು.

ಪಟಾಕಿ ಮಳಿಗೆಗಳ ಬಳಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಇದಕ್ಕಾಗಿ ನಿಗಧಿತ ಅಂತರದ ಗುರುತು ಹಾಕಿರುವ ಬಗ್ಗೆ ಮತ್ತು ಸಾರ್ವಜನಿಕರು ಮಾಸ್ಕ್ ದರಿಸಿರುವುದರ ಕುರಿತು ಅಧಿಕಾರಿ ಗಳು ಪರಿಶೀಲಸಿ, ನಿಯಮ ಉಲ್ಲಂಘನೆ ಯಾಗಿದ್ದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಜಿ.ಜಗದೀಶ್ ಸೂಚನೆ ನೀಡಿದರು.


ಸಾರ್ವಜನಿಕರು ಪಟಾಕಿ ಕೊಳ್ಳುವಾಗ ಹಸಿರು ಪಟಾಕಿ ಎಂಬುದರ ಬಗ್ಗೆ ಪರಿಶೀಲಿಸಿ ಖರೀದಿಸಬೇಕು, ಜಿಲ್ಲೆಯಲ್ಲಿ ಪ್ರಸ್ತುತ ಕೋವಿಡ್ ಪ್ರಕರಣಗಳು ಕಡಿಮೆಯಾಗಿದ್ದು, ಸಾರ್ವಜನಿಕರು ಹಬ್ಬದ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಮತ್ತು ಮಾಸ್ಕ್ ಧರಿಸುವುದನ್ನು ಮರೆಯ ಬಾರದು.

ಸರ್ಕಾರದ ಮಾರ್ಗಸೂಚಿಯಂತೆ ಸುರಕ್ಷಿತ ಕ್ರಮಗಳನ್ನು ಅನುಸರಿಸಿ ಹಬ್ಬವನ್ನು ಆಚರಿಸುವಂತೆ ಹಾಗೂ ಕೋವಿಡ್ ಆಸ್ಪತ್ರೆಯ 100 ಮೀ ವ್ಯಾಪ್ತಿಯಲ್ಲಿ ಯಾವುದೇ ಪಟಾಕಿಗಳನ್ನು ಸಿಡಿಸದಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

ಹಬ್ಬದ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಕಸ ಸಂಗ್ರಹವಾಗ ದಂತೆ ಸಮರ್ಪಕವಾಗಿ ಕಸ ವಿಲೇವಾರಿ ಯನ್ನು ಮಾಡಿ, ಸ್ಚಚ್ಚತೆಯನ್ನು ಕಾಪಾಡು ವಂತೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಎಸ್ಪಿ ವಿಷ್ಣುವರ್ಧನ್, ಜಿ.ಪಂ. ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್, ಕುಂದಾ ಪುರ ಉಪ ವಿಭಾಗಾಧಿಕಾರಿ ರಾಜು, ಎಲ್ಲಾ ತಾಲೂಕುಗಳ ತಹಸೀಲ್ದಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತ ರಿದ್ದರು.

 
 
 
 
 
 
 
 
 
 
 

Leave a Reply