Janardhan Kodavoor/ Team KaravaliXpress
25.6 C
Udupi
Thursday, September 29, 2022
Sathyanatha Stores Brahmavara

ಪಟ್ಲ ಅಣ್ಣಯ್ಯ ನಾಯಕ್ ನಿಧನ 

ಮಣಿಪಾಲ: ಪಟ್ಲ ಶಾಲೆಯ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿ, ತನ್ನ ರಾಜಕೀಯ ಜೀವನದಲ್ಲಿ ಜೆಡಿಎಸ್ ಪಕ್ಷದಲ್ಲಿ ಉನ್ನತ ಸ್ಥಾನದಲ್ಲಿ ಗುರುತಿಸಿಕೊಂಡಿರುವ, ರಾಜಕೀಯ ನೇತಾರ, ಪಟ್ಲ ಅಣ್ಣಯ್ಯ ನಾಯಕ್ (74ವ.)ಇಂದು ವಿಧಿವಶರಾಗಿದ್ದಾರೆ. 
 ಕಳೆದ ಒಂದು ತಿಂಗಳಿಂದ ಉದರ ನಿಮಿತ್ತ ಕಾಯಿಲೆಯಿಂದ ಬಳಲುತ್ತಿದ್ದು, ಇಂದು ನಿಧನರಾಗಿದ್ದಾರೆ, ಜೆಡಿಎಸ್, ಬಿಜೆಪಿ, ಮತ್ತು ಕಾಂಗ್ರೆಸ್ ಪಕ್ಷದಲ್ಲಿಯೂ ತಮ್ಮ ಪ್ರಭಾವವನ್ನು ಬೀರಿದ್ಧರು. ಪರ್ಕಳದ ಹೆರ್ಗ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಪಾರ ಶಿಷ್ಯವೃಂದವನ್ನು ಹೊಂದಿದ್ದರು. 
ಗುತ್ತಿಗೆದಾರರ ರಾಜ್ಯ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು  ಹಾಗೂ ಉಡುಪಿ  ಜಿಲ್ಲಾ ಗುತ್ತಿಗೆದಾರರ ಸಂಘದ ಗೌರವ ಅಧ್ಯಕ್ಷ ರಾಗಿದ್ದರು.  ಅಲ್ಪಕಾಲದ ಅಸೌಖ್ಯದ ಕಾರಣ ಇಂದು ಬೆಳಿಗ್ಗೆ ನಿಧನರಾದರು. ಇಬ್ಬರು ಪುತ್ರಿಯರನ್ನು ಆಗಲಿದ್ದಾರೆ. ಹೋಟೆಲ್ ಸ್ವಾಗತ್ ಪರ್ಕಳದ ಮೋಹನ್ ದಾಸ್ ನಾಯಕ್, ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳಬೆಟ್ಟು ಸಂತಾಪ ಸೂಚಿಸಿದ್ದಾರೆ. 
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!