ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಗಳ “ಪದ್ಮವಿಭೂಷಣ” ಪ್ರಶಸ್ತಿ ಸ್ವಾಗತ ಸಮಾರಂಭ

ಉಡುಪಿ: ಭಾರತ ಸರ್ಕಾರದಿಂದ ಕೀರ್ತಿಶೇಷ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಗೆ ಕೊಡಮಾಡಿದ ಪದ್ಮವಿಭೂಷಣ ಪ್ರಶಸ್ತಿಯನ್ನು ಇಂದು ಉಡುಪಿಯಲ್ಲಿ ಗೌರವಪೂರ್ವಕವಾಗಿ ಸ್ವಾಗತಿಸಲಾಯಿತು.


 
ಉಡುಪಿ ಸಂಸ್ಕೃತ ಕಾಲೇಜಿನಿಂದ ಅಲಂಕೃತ ವಾಹನದಲ್ಲಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಭಾವಚಿತ್ರ ಹಾಗೂ ಪದ್ಮವಿಭೂಷಣ ಪ್ರಶಸ್ತಿಯನ್ನು ಇಟ್ಟು ಸಾಂಪ್ರದಾಯಿಕ ಬಿರುದಾವಳಿ, ಚಂಡೆ ವಾದ್ಯಮೇಳಗಳ ಸಹಿತ ಗಣ್ಯರ ಉಪಸ್ಥಿತಿಯಲ್ಲಿ ಶ್ರೀ ಕೃಷ್ಣ ಮಠಕ್ಕೆ ತಂದು ಕೃಷ್ಣ ದೇವರಿಗೆ ಅರ್ಪಿಸಿ, ಅಷ್ಟ  ಮಠಾಧೀಶರುಗಳಿಗೆ ಅದನ್ನು ಪ್ರದರ್ಶಿಸಿ ಬಳಿಕ ಪುನಃ ಅದೇ ವಾಹನದಲ್ಲಿ ಶ್ರೀ ಪೇಜಾವರ ಮಠಕ್ಕೆ ತಂದು ಅಲ್ಲಿ ಗುರುಗಳ ಪೀಠದಲ್ಲಿ ಇಡಲಾಯಿತು. ಬಳಿಕ ಪೇಜಾವರ ಮಠದ ಮುಂಭಾಗದಲ್ಲಿ ಸಭೆ ನಡೆಯಿತು.


 
ಪೇಜಾವರ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಪರ್ಯಾಯ ಅದಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು, ಪಲಿಮಾರು ಮಠದ ಕಿರಿಯ ಯತಿ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು, ಶಾಸಕ ಕೆ. ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಉಡುಪಿ ನಗರಸಭಾ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾದ ಶ್ಯಾಮಲಾ ಕುಂದರ್ ಮುಂತಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply