Janardhan Kodavoor/ Team KaravaliXpress
26.6 C
Udupi
Thursday, January 20, 2022
Sathyanatha Stores Brahmavara

ಪೇಜಾವರ ಶ್ರೀಗಳನ್ನು ಟೀಕಿಸುವಂತ ಮಾತು ಹಂಸಲೇಖ ರಂತವರಿಂದ ಬರಬಾರದಿತ್ತು – ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

ಉಡುಪಿ: ಪೇಜಾವರ ಶ್ರೀಗಳನ್ನು ಟೀಕಿಸುವಂತ ಮಾತು ಹಂಸಲೇಖ ಅವರ ಬಾಯಿಯಿಂದ ಬರಬಾರದಿತ್ತು ಸಮಾಜದ ಎಲ್ಲರ ಉದ್ಧಾರವನ್ನು ವಿಶ್ವೇಶತೀರ್ಥರು ಬಯಸಿದ್ದರು ಗುರುಗಳು ಜನರ ಹೃದಯದಲ್ಲಿ ಯಾವ ಕೃಷ್ಣನನ್ನು ಕಂಡಿದ್ದರೋ ಆ ಕೃಷ್ಣನೇ ಅದಕ್ಕೆ ಬೇಕಾದ ಪ್ರತಿಕಾರ ಮಾಡುತ್ತಾನೆ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಅವರು ಸೋಮವಾರ ಉಡುಪಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಪದ್ಮವಿಭೂಷಣ ಪ್ರಶಸ್ತಿ ಬಂದಿರುವುದು ನನ್ನ ಗುರುಗಳಿಗೆ ಹಾಗಾಗಿ ಹಂಸಲೇಖ ಅವರು ನನ್ನ ಗುರುಗಳನ್ನೇ ಟೀಕಿಸಿರಬೇಕು. ಇಂತಹ ಮಾತು ಹಂಸಲೇಖ ಬಾಯಿಂದ ಬರಬಾರದಿತ್ತು ಸಮಾಜ ಅವರನ್ನು ಎತ್ತರದಲ್ಲಿ ಇರಿಸಿ ಗೌರವಿಸುತ್ತದೆ. ಪ್ರಚಾರಕ್ಕೋಸ್ಕರ ಸಾಕಷ್ಟು ಮಂದಿ ಹೀಗೆ ಮಾಡುತ್ತಾರೆ. 

ಶ್ರೀ ಕೃಷ್ಣನಿಗೆ ಅಗ್ರಪೂಜೆ ನೀಡುವಾಗ ಶಿಶುಪಾಲನೂ ಇದೇ ರೀತಿ ವಿರೋಧಿಸಿದ್ದ ಆದರೆ ಶಿಶುಪಾಲನಿಗೆ ಕೃಷ್ಣನೇ ತಕ್ಕಶಾಸ್ತಿ ಮಾಡಿದ್ದ. ನನ್ನ ಗುರುಗಳು ಸಮಾಜದ ಎಲ್ಲರ ಹೃದಯದಲ್ಲಿ ಕಷ್ಣನನ್ನು ಕಂಡವರು ಆದ್ದರಿಂದಲೇ ಅವರು ದಲಿತರ ಕೇರಿಗೂ ಹೋಗುತ್ತಿದ್ದರು. ನೆರೆಹಾವಳಿ ಭೂಕಂಪ ಆದಾಗಲೂ ಭೇಟಿ ನೀಡುತ್ತಿದ್ದರು.

ನಮ್ಮ ಉದ್ದೇಶ ಪ್ರಾಮಾಣಿಕವಾಗಿದೆ, ಯಾರೋ ಏನೋ ಅಂದ ಮಾತ್ರಕ್ಕೆ ನಮ್ಮ ಕೆಲಸ ನಿಲ್ಲಿಸುವುದಿಲ್ಲ ಯಾರ ಹೊಗಳಿಕೆಗೂ ನಾವು ಈ ಕೆಲಸವನ್ನು ಮಾಡಿದ್ದಲ್ಲ. ದಲಿತರ ಜೊತೆ ನಾವು ಇದ್ದೇವೆ, ದಲಿತರು ನಮ್ಮಿಂದ ಹೊರತಲ್ಲ ಈ ಐಕ್ಯ ಸಂದೇಶ ನೀಡುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತೇವೆ. ಗುರುಗಳ ಅಭಿಮಾನದಿಂದ ಯಾರಾದರೂ ಪ್ರತಿಭಟಿಸಿದರೆ ಅದು ಅವರವರ ವೈಯಕ್ತಿಕ ವಿಚಾರ ಆದರೆ ನಾವಂತೂ ಯಾವುದೇ ಪ್ರತಿಭಟನೆ ನಡೆಸುವುದಿಲ್ಲ ಎಂದರು.

ಹಸಲೇಖ:-   ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹಂಸಲೇಖ ಅವರು ಪೇಜಾವರ ಸ್ವಾಮಿಗಳು ದಲಿತರ ಮನೆಗೆ ವಾಸ್ತವ್ಯಕ್ಕೆ ಹೋಗಿದ್ದಾರೆ ಅಂತ ಸ್ಟೇಟ್‌ಮೆಂಟ್ ಬಂದಿದೆ. ಪೇಜಾವರ ಸ್ವಾಮಿಗಳು ದಲಿತರ ಮನೆಗೆ ಹೋಗಿ ಅಲ್ಲಿ ಕುಳಿತು ಕೊಳ್ಳಬಹುದಷ್ಟೇ, ಅವರು ಕೋಳಿ ಕೊಟ್ಟರೆ ತಿನ್ನೋಕೆ ಆಗುತ್ತದೆಯೇ..? ಕೋಳಿ ಬೇಡ, ಕುರಿ ರಕ್ತದ ಫ್ರೈ ಮಾಡಿಕೊಟ್ಟರೆ ತಿಂತಾರಾ..? ಲಿವರ್ ಫ್ರೈ ತಿಂತಾರಾ, ಆಗತ್ತಾ..? ಅಂದರೆ, ದಲಿತರ ಮನೆಗೆ ಬಲಿತರು ಹೋಗೋದು ಏನ್ ದೊಡ್ಡ ವಿಷ್ಯಾ ಅಂತ ನಂಗ್ ಅನ್ನಿಸ್ತು ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಅಂತ ಶುರು ಮಾಡಿದ್ರು. ಈಗ ಎಲ್ಲರೂ ಗ್ರಾಮ ವಾಸ್ತವ್ಯ ಶುರು ಮಾಡಿದ್ದಾರೆ..’ ಎಂದು ಹೇಳಿದ್ದರು. 

ಈ ಮಾತುಗಳಿಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.

 
- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!