Janardhan Kodavoor/ Team KaravaliXpress
30.6 C
Udupi
Sunday, October 2, 2022
Sathyanatha Stores Brahmavara

ರಾಜ್ಯಸಭೆಗೆ ಹೆಗ್ಗಡೆ : ಪೇಜಾವರ ಶ್ರೀ ತುಂಬು ಸಂತಸ

ಭಾರತ ಸರ್ಕಾರವು ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಪದ್ಮವಿಭೂಷಣ ಡಾ ಡಿ ವೀರೇಂದ್ರ ಹೆಗ್ಗಡೆಯವರನ್ಬು ರಾಜ್ಯಸಭೆ ಸದಸ್ಯರನ್ನಾಗಿ ನಾಮನಿರ್ದೇಶನಗೊಳಿಸಿರುವುದಕ್ಕೆ ಶ್ರೀ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ತುಂಬು ಸಂತಸ ವ್ಯಕ್ತಪಡಿಸಿದ್ದಾರೆ.‌

ಶ್ರೀ ಕ್ಷೇತ್ರದ ಮೂಲಕ ರಾಷ್ಟ್ರದ ಏಳಿಗೆಗೆ ಬಹುಮುಖಿ ಹಾಗೂ ಅತ್ಯಂತ ಪರಿಣಾಮಕಾರಿಯಾದ ಕೊಡುಗೆ ಮತ್ತು ಕೈಂಕರ್ಯಗಳನ್ನು ನಿರ್ವಹಿಸುತ್ತಿರುವ ಹೆಗ್ಗಡೆಯವರ ನಿಯುಕ್ತಿಯಿಂದ ರಾಜ್ಯಸಭೆಯ ಘನತೆ ನೂರ್ಮಡಿಸಿದಂತಾಗಿದೆ. ನಾವು ಮಾತ್ರವಲ್ಲ; ಇಡೀ ನಾಡೇ ಈ ಆಯ್ಕೆಯಿಂದ ಸಂತಸಪಡುವಂತಾಗಿದೆ.
ಶ್ರೀಯುತ ಹೆಗ್ಗಡೆಯವರಿಗೆ ಹೃತ್ಪೂರ್ವಕ ಅಭಿನಂದನೆಗಳು .ಅವರಿಗೆ ಶ್ರೀಕೃಷ್ಣನ ಪೂರ್ಣಾನುಗ್ರವನ್ನು ಪ್ರಾರ್ಥಿಸುತ್ತೇವೆ . ಎಂದು ಶ್ರೀಗಳು ಸಂದೇಶನೀಡಿದ್ದಾರೆ.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!