ಸರಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸಿ ಸೇವೆ ಸುಶಾಸನ ಬಡವರ ಕಲ್ಯಾಣ ಅಭಿಯಾನ ಯಶಸ್ವಿಗೊಳಿಸಿ: ಪೆರ್ಣಂಕಿಲ ಶ್ರೀಶ ನಾಯಕ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ‌ ಕೇಂದ್ರ ಸರಕಾರದ ಎಂಟು ವರ್ಷಗಳ ಆಡಳಿತಾವಧಿಯಲ್ಲಿ ಅನುಷ್ಠಾನಗೊಂಡಿರುವ ಅನೇಕ ಜನಪರ ಯೋಜನೆಗಳ ಬಗ್ಗೆ ಜನಮಾನಸದಲ್ಲಿ ಅರಿವು ಮೂಡಿಸುವ ಮೂಲಕ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಅಭಿಯಾನವನ್ನು ಯಶಸ್ವಿಗೊಳಿಸಿ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ಉಡುಪಿ ಗ್ರಾಮಾಂತರ ಮಂಡಲ ಪ್ರಭಾರಿ ಪೆರ್ಣಂಕಿಲ ಶ್ರೀಶ ನಾಯಕ್ ಕರೆ ನೀಡಿದರು.

ಅವರು ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲಾಧ್ಯಕ್ಷೆ ವೀಣಾ ನಾಯಕ್ ಅಧ್ಯಕ್ಷತೆಯಲ್ಲಿ ಉಡುಪಿ ಗ್ರಾಮಾಂತರ ಕಛೇರಿಯಲ್ಲಿ ನಡೆದ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಸ್ವಾತಂತ್ರ್ಯಾ ನಂತರ ಮೋದಿ ಆಡಳಿತದ ಪರಿಣಾಮಕಾರಿ ಬದಲಾವಣೆಗಳಿಂದಾಗಿ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ದೊರಕುವಂತಾಗಿದೆ. ಕಾಂಗ್ರೆಸ್ ನ ‘ಗರೀಬೀ ಹಠಾವೋ’ ಕೇವಲ ಘೋಷಣೆಯಾಗಿಯೇ ಉಳಿದಿರುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ‘ಗರೀಬ್ ಕಲ್ಯಾಣ್ ಅನ್ನ ಯೋಜನೆ’ಯ ಮೂಲಕ ಹಸಿವುಮುಕ್ತ ಸಮಾಜ ನಿರ್ಮಾಣಕ್ಕೆ ನಾಂದಿ ಹಾಡಿದೆ. ಸಾರ್ಥಕ ಸೇವೆ, ಉತ್ತಮ ಆಡಳಿತ ಮತ್ತು ಬಡವರ ಪರ ಕಾಳಜಿಯ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಯಶಸ್ವಿ 8ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಹಮ್ಮಿಕೊಂಡಿರುವ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ ಅಭಿಯಾನದಲ್ಲಿ ಜಿಲ್ಲಾ ಮತ್ತು ಮಂಡಲಗಳ ಸಂಚಾಲಕರ ತಂಡದ ಜೊತೆಗೆ ಪಕ್ಷದ ಜವಾಬ್ದಾರಿಯುತ ಪದಾಧಿಕಾರಿಗಳು ಹಾಗೂ ಕಾರ್ಯಕರ್ತ ಬಂಧುಗಳು ಕೈಜೋಡಿಸಿ ಸಂಘಟಿತ ಪ್ರಯತ್ನದ ಮೂಲಕ ಅಭಿಯಾನವನ್ನು ಅರ್ಥಪೂರ್ಣವಾಗಿ ಆಚರಿಸುವಂತಾಗಬೇಕು ಎಂದು ಶ್ರೀಶ ನಾಯಕ್ ಹೇಳಿದರು.

ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಅಭಿಯಾನದ 17‌ ವಿಭಾಗಗಳ ಸಂಚಾಲಕರರು ಮತ್ತು ಸಹ ಸಂಚಾಲಕರ ಜವಾಬ್ದಾರಿ ಹಾಗೂ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.

ಅಭಿಯಾನದ ಮಂಡಲ ಸಂಚಾಲಕರು, ಸಹ ಸಂಚಾಲಕರು, ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಬಿಜೆಪಿ ಉಡುಪಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ, ಸಚಿನ್ ಪೂಜಾರಿ ವಂದಿಸಿದರು.

 
 
 
 
 
 
 
 
 
 
 

Leave a Reply