ಫೆ.27: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಉಡುಪಿಗೆ

ಕರ್ನಾಟಕ ವಿಧಾನಸಭಾ ಚುನಾವಣೆಯ ರಾಜ್ಯ ಸಹ ಉಸ್ತುವಾರಿಯಾಗಿ ನಿಯೋಜನೆಗೊಂಡಿರುವ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಫೆ.27ರ ಬೆಳಿಗ್ಗೆ 9.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ಆಗಮಿಸಲಿದ್ದು, ಉಡುಪಿಯ 5 ವಿಧಾನಸಭಾ ಕ್ಷೇತ್ರದಾದ್ಯಂತ ಸಂಚರಿಸಲಿರುವ 5 ‘ಪ್ರಗತಿ ರಥ’ಗಳಿಗೆ ಚಾಲನೆ ನೀಡಲಿದ್ದಾರೆ.

ಮಧ್ಯಾಹ್ನ 3.00 ಗಂಟೆಗೆ ಕಾರ್ಕಳದಲ್ಲಿ ನಡೆಯುವ ಬೃಹತ್ ‘ಬೈಕ್ ಜಾಥಾ’ದಲ್ಲಿ ಭಾಗವಹಿಸಿ, ಸಂಜೆ 4.00 ಗಂಟೆಗೆ ಅಜೆಕಾರಿನಲ್ಲಿ ನಡೆಯುವ ಉಡುಪಿ ಜಿಲ್ಲಾ ಮಟ್ಟದ ‘ಯುವ ಮೋರ್ಚಾ ಸಮಾವೇಶ’ದಲ್ಲಿ ಭಾಗಿಯಾಗಲಿದ್ದಾರೆ.

ಸಚಿವ ವಿ.ಸುನೀಲ್ ಕುಮಾರ್, ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ! ಸಂದೀಪ್ ಕೆ.ಸಿ. ಸಹಿತ ರಾಜ್ಯ ಮತ್ತು ಜಿಲ್ಲಾ ನಾಯಕರು ಭಾಗವಹಿಸಲಿದ್ದಾರೆ.

ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 
 
 
 
 
 
 
 
 
 
 

Leave a Reply