Janardhan Kodavoor/ Team KaravaliXpress
25.6 C
Udupi
Thursday, September 29, 2022
Sathyanatha Stores Brahmavara

ಮಾಜಿ ಐಪಿಎಸ್ ಅಧಿಕಾರಿ ಕೆ ಅಣ್ಣಾಮಲೈ ಬಿಜೆಪಿ ರಾಜ್ಯಾಧ್ಯಕ್ಷ

ದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರನ್ನು  ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಿಸಲಾಗಿದೆ.
ಅಣ್ಣಾಮಲೈ ಅವರನ್ನು ತಮಿಳುನಾಡು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದ ಅಣ್ಣಾಮಲೈ ಅವರಿಗೆ ಇದೀಗ ಮಹತ್ವದ ಹುದ್ದೆ ದೊರೆತಂತಾಗಿದೆ.

2024ರ ಲೋಕಸಭಾ ಚುನಾವಣೆಗಳನ್ನು ಕೇಂದ್ರೀಕರಿಸಿ ಬಿಜೆಪಿ ಪಕ್ಷವು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಎಲ್​ ಮುರುಗನ್ ಅವರನ್ನು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಡೇರಿ ಖಾತೆ ಸಚಿವರನ್ನಾಗಿ ಪ್ರಧಾನಿ ಮೋದಿ ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದಾರೆ. ಹಾಗಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ತೆರವಾಗಿತ್ತು. 

ಪ್ರಥಮ ಚುಂಬನ ದಂತ ಭಗ್ನ ಅಂದಂತೆ ಮೊದಲ ಚುನಾವಣೆಯಲ್ಲಿ ಸೋತ ಅಣ್ಣಾಮಲೈಗೆ ಸಿಕ್ಕಿತು ಭರ್ಜರಿ ಪೊಲಿಟಿಕಲ್​ ಟಾನಿಕ್:


ಕಳೆದ ವಿಧಾಸನಭೆ ಚುನಾವಣೆಯಲ್ಲಿ ಪಕ್ಷ ಮತ್ತು ವೈಯಕ್ತಿವಾಗಿ ಸೋಲುಂಡ ಅಣ್ಣಾಮಲೈ ಒಂದಷ್ಟು ಭ್ರಮನಿರಸಗೊಂಡಿರುವುದಂತೂ ನಿಜ . ಆದರೆ ಅವರೊಬ್ಬ ಸಮರ್ಥ ನಾಯಕನಾಗಿ ರೂಪುಗೊಳ್ಳುತ್ತಿದ್ದಾನೆ ಅನ್ನುತ್ತಿದೆ ತಮಿಳುನಾಡು ಬಿಜೆಪಿ. ಹಾಗಾಗಿ ಮುಂದಿನ ಲೋಕಸಭಾ ಚುನಾವಣೆಗೆ ಈಗಿನಿಂದಲೇ ಪಕ್ಷ ಕಟ್ಟುವಲ್ಲಿ ಕಟ್ಟಾಳಾಗಿ ಅಣ್ಣಾಮಲೈರನ್ನು ತೊಡಗಿಸಬಹುದು ಎಂಬುದು ರಾಜ್ಯ ಬಿಜೆಪಿ ನಾಯಕರ ಲೆಕ್ಕಾಚಾರ. ಅಣ್ಣಾಮಲೈ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ವೈಯಕ್ತಿಕ ವರ್ಚಸ್ಸು, ಜನಪ್ರಿಯತೆಯನ್ನು ಉಳಿಸಿಕೊಂಡಿದ್ದಾರೆ. 

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!