ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಶ್ರೀಮತಿ ಮಂಗಳಾ ಸುರೇಶ್ ಅಂಗಡಿ ಅವರು ಮಂಗಳವಾರ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿಯೂ ಆದ ಡಾ.ಕೆ.ಹರೀಶ್‍ಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು.ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ಶ್ರೀ ನಳಿನ್‍  ಕುಮಾರ್ ಕಟೀಲ್, ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ ಜೋಶಿ, ಉಪ ಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಕಾರಜೋಳ, ಸಚಿವರಾದ ಶ್ರೀ ಕೆ.ಎಸ್.ಈಶ್ವರಪ್ಪ, ಶಾಸಕರಾದ ಶ್ರೀ ಅಭಯ್ ಪಾಟೀಲ್, ಶ್ರೀ ಅನಿಲ್ ಬೆನಕೆ, ಶ್ರೀ ದುರ್ಯೋಧನ ಐಹೊಳೆ, ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಕೇಂದ್ರದ ಮಾಜಿ ಸಚಿವರಾದ ದಿವಂಗತ ಶ್ರೀ ಸುರೇಶ್ ಅಂಗಡಿ ಅವರು ಬೆಳಗಾವಿ ಕ್ಷೇತ್ರದಲ್ಲಿ ಮಾಡಿದ ಜನಪರ ಕಾರ್ಯಗಳನ್ನು ಮುಂದುವರಿಸಲು ಹಾಗೂ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸಲು ಮತದಾರರು ಬೆಂಬಲ ನೀಡಲಿದ್ದಾರೆ ಎಂದು ಶ್ರೀಮತಿ ಮಂಗಳಾ ಸುರೇಶ್ ಅಂಗಡಿ ಅವರು ವಿಶ್ವಾಸ ವ್ಯಕ್ತಪಡಿಸಿದರು

 
 
 
 
 
 
 
 
 
 
 

Leave a Reply