ಆಪ್ ಮಾಜಿ ಜಿಲ್ಲಾಧ್ಯಕ್ಷ ದಿವಾಕರ ಸನಿಲ್ ಸಹಿತ ಹಲವರು ಬಿಜೆಪಿಗೆ


ಬ್ರಹ್ಮಾವರ: ಬಿಜೆಪಿ ತತ್ವ ಸಿದ್ಧಾಂತ ಮೆಚ್ಚಿ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಕೆ. ರಘುಪತಿ ಭಟ್ ಕಾರ್ಯವೈಖರಿ, ಜನಪರ ಕಾಳಜಿ ಹಾಗೂ ಕ್ಷೇತ್ರದಾದ್ಯಂತ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯ ದರ್ಶಿ ದಿವಾಕರ ಸನಿಲ್, ಜಿಲ್ಲಾಧ್ಯಕ್ಷ ಡಾಲ್ಫಿ ವಿಕ್ಟರ್ ಲೂಯಿಸ್, ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಜಯಕರ ಬೆಂಗ್ರೆ, ಉಪ್ಪೂರಿನ ಕಾಂಗ್ರೆಸ್ ಕಾರ್ಯಕರ್ತ ಶಶಿಕಾಂತ್ ಪೂಜಾರಿ, ವಾರಂಬಳ್ಳಿ ಗ್ರಾ, ಪಂ. ಮಾಜಿ ಅಧ್ಯಕ್ಷೆ ಶಾರದಾ, ಕಾಂಗ್ರೆಸ್ ಕಾರ್ಯಕರ್ತ ಕಪಿಲೇಶ್ವರ ಮಂಗಳವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಬಿಜೆಪಿ ಸೇರ್ಪಡೆಗೊಂಡರು.

ಶಾಸಕ ಕೆ. ರಘುಪತಿ ಭಟ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕರದ ಸಾಧನೆಗಳನ್ನು ಜನತೆಗೆ ತಿಳಿಸುವ ಜೊತೆಗೆ ಕಳೆದ 5 ವರ್ಷದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯ ಗಳನ್ನು ಗಮನಿಸಿ ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶಪಾಲ್ ಸುವರ್ಣ ಅವರಿಗೆ ಮತ ನೀಡಿ ಅತ್ಯಂತ ಅಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ವಿನಂತಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶಪಾಲ್ ಸುವರ್ಣ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ವಿಧಾನ ಪರಿಷತ್ ಮಾಜಿ ಸದಸ್ಯೆ ಹಾಗೂ ಚಲನ ಚಿತ್ರ ನಟಿ ತಾರಾ, ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸುಪ್ರಸಾದ್ ಶೆಟ್ಟಿ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ, ಗ್ರಾಮಾಂತರ ಮಹಿಳಾ ಮೋರ್ಚಾ ಅಧ್ಯಕ್ಷೆ ವಸಂತಿ ಬೈಕಾಡಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಅಶ್ವಿನಿ, ಚಾಂತಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾ ಯತ್ ಮಾಜಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಬ್ರಹ್ಮಾವರ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷ ಸುಧೀರ್ ಶೆಟ್ಟಿ, ರಾಜ್ಯ ಕಾರ್ಯ ಕಾರಣಿ ಸದಸ್ಯ ಬಿ. ಎನ್. ಶಂಕರ ಪೂಜಾರಿ, ಪಕ್ಷದ ಪ್ರಮುಖರಾದ ಬಿರ್ತಿ ರಾಜೇಶ್ ಶೆಟ್ಟಿ, ಧನಂಜಯ ಅಮೀನ್, ಮೋಹನ್ ಶೆಟ್ಟಿ, ಹರಿಮಕ್ಕಿ ರತ್ನಾಕರ ಶೆಟ್ಟಿ, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಗಣೇಶ್ ಕುಲಾಲ್ ಮತ್ತು ಸಚಿನ್ ಪೂಜಾರಿ ಇದ್ದರು.

 
 
 
 
 
 
 
 
 
 
 

Leave a Reply