ಜಿಲ್ಲೆಯ ಐದೂ ಸ್ಥಾನಗಳನ್ನು ಜಯಿಸಿರುವ ಉಡುಪಿ ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಉಡುಪಿ ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳಲ್ಲಿ ದೊಡ್ಡ ಅಂತರದ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿ ಬಳಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷರಾದ ಪೆರ್ಣಂಕಿಲ ಶ್ರೀಶ ನಾಯಕ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಕೋಶಾಧಿಕಾರಿ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ನಳಿನಿ ಪ್ರದೀಪ್ ರಾವ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಷ್ಮಿತಾ ಬಿ. ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಪ್ರಧಾನ ಕಾರ್ಯದರ್ಶಿಗಳಾದ ಆಲ್ವಿನ್ ಡಿಸೋಜ, ಆಸಿಫ್ ಕಟಪಾಡಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾದ ವಿಜಯ ಕುಮಾರ್ ಉದ್ಯಾವರ, ಜಗದೀಶ್ ಆಚಾರ್ಯ ಕಪ್ಪೆಟ್ಟು, ಪ್ರಮುಖರಾದ ಮಹೇಂದ್ರ ಕುಮಾರ್ ನೀಲಾವರ, ರವೀಂದ್ರ ಪಾಟ್ಕರ್ ಶಿರ್ವ, ಲಕ್ಷ್ಮೀಶ ಬಂಗೇರ ಮಲ್ಪೆ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply