ಕಾಂಗ್ರೆಸ್ಸಿನ ಜನವಿರೋಧಿ ನೀತಿ ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ಪ್ರತಿಭಟನೆ

ವಿಧಾನಸಭಾ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಜನತೆಗೆ ನೀಡಿರುವ 5 ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ 24 ಗಂಟೆಗಳೊಳಗೆ ಯಥಾವತ್ತಾಗಿ ಜಾರಿಗೊಳಿಸದೆ ರಾಜ್ಯದ ಜನತೆಗೆ ದ್ರೋಹ ಬಗೆದಿದೆ. 200 ಯುನಿಟ್ ಉಚಿತ ವಿದ್ಯುತ್ ಎಂದಿರುವ ಕಾಂಗ್ರೆಸ್ ಇದೀಗ 1 ವರ್ಷದ ಸರಾಸರಿ ಎಂದು ವರಸೆ ಬದಲಿಸಿ, ವಿದ್ಯುತ್ ದರವನ್ನು ಕೂಡಾ ದಿಡೀರ್ ಹೆಚ್ಚಿಸಿರುವುದು ಖಂಡನೀಯ. ದಿನಕ್ಕೊಂದು ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಗೊಂದಲ ಸೃಷ್ಠಿಸುವ ಬದಲು ಸರಕಾರ ಜನಪರ ಆಡಳಿತದತ್ತ ಗಮನ ಹರಿಸುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಕಾಂಗ್ರೆಸ್ಸಿನ ಜನವಿರೋಧಿ ನೀತಿಗಳನ್ನು ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನಡೆದ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದರು.

ಕೊಟ್ಟ ಮಾತು ತಪ್ಪಿರುವ ರಾಜ್ಯ ಕಾಂಗ್ರೆಸ್ ಸರಕಾರದ ಮಾನಸಿಕತೆ 15 ದಿನಗಳಲ್ಲೇ ಸಾಬೀತಾಗಿದೆ. ಗೃಹ ಲಕ್ಷ್ಮಿ, 10 ಕೆ.ಜಿ. ಅಕ್ಕಿ, ಪದವೀಧರರ ಮಾಸಾಶನ, ಬಸ್ ಪ್ರಯಾಣ ಗ್ಯಾರಂಟಿಯಲ್ಲೂ ಕಾಂಗ್ರೆಸ್ ಸರಕಾರ ಸ್ಪಷ್ಟತೆ ಇಲ್ಲದೆ ತಾರತಮ್ಯ ನೀತಿ ಅನುಸರಿಸಿ ಜನತೆಯಲ್ಲಿ ಗೊಂದಲ ಸೃಷ್ಟಿಸಿ ಮೋಸ ಎಸಗಿದೆ ಎಂದರು.

ಸಚಿವ ಎಂ.ಬಿ. ಪಾಟೀಲ್ ಬಿಜೆಪಿ ಕಾರ್ಯಕರ್ತರು ಬಾಲ ಬಿಚ್ಚಿದರೆ ಜೈಲಿಗೆ ಹಾಕುವುದಾಗಿ ದುರಹಂಕಾರದ ಮಾತನ್ನಾಡಿರುವುದು ಖಂಡನೀಯ. ಇಂತಹ ಗೊಡ್ಡು ಬೆದರಿಕೆಗಳಿಗೆ ಬಿಜೆಪಿ ಹೆದರಲ್ಲ. ಸರಕಾರದ ಜನವಿರೋಧಿ ನೀತಿಯನ್ನು ಬಿಜೆಪಿ ಎಂದಿಗೂ ವಿರೋಧಿಸುತ್ತದೆ. ದನ ಮತ್ತು ಕೋಣದ ವ್ಯತ್ಯಾಸ ತಿಳಿಯದವರನ್ನು ಪಶು ಸಂಗೋಪನಾ ಸಚಿವರನ್ನಾಗಿ ನೇಮಕ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನಾಚಿಕೆಯಾಗಬೇಕು ಎಂದರು.

ಕೇವಲ ಚುನಾವಣೆಯನ್ನು ಗೆಲ್ಲುವ ಒಂದೇ ಉದ್ದೇಶದಿಂದ ಉಚಿತ ಗ್ಯಾರಂಟಿಗಳನ್ನು ಘೋಷಿಸಿರುವ ಕಾಂಗ್ರೆಸ್ ಜನತೆಗೆ ನೀಡಿರುವ ವಾಗ್ದಾನವನ್ನು ಯಥಾವತ್ತಾಗಿ ಈಡೇರಿಸುವಲ್ಲಿ ವಿಫಲವಾಗುತ್ತಿರುವುದು ಸ್ಪಷ್ಟವಾಗುತ್ತಿದೆ. ರಾಜ್ಯದ ಜನತೆ ಕಾಂಗ್ರೆಸ್ಸಿನ ಬಣ್ಣ ಬದಲಿಸುವ ಗೋಸುಂಬೆತನವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು ಸೂಕ್ತ ಸಮಯದಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮತ್ತು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮಾತನಾಡಿ, ಕಾಂಗ್ರೆಸ್ ಸರಕಾರ ಉಚಿತ ಗ್ಯಾರಂಟಿಗಳ ಜಾರಿಯಲ್ಲಿ ಜನತೆಗೆ ಎಸಗಿದ ಮೋಸ ಮತ್ತು ಕಾಂಗ್ರೆಸ್ಸಿನ ಜನ ವಿರೋಧಿ ನೀತಿಯನ್ನು ಖಂಡಿಸಿದರು.

ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಗುರುಪ್ರಸಾದ್ ಶೆಟ್ಟಿ, ನಳಿನಿ ಪ್ರದೀಪ್ ರಾವ್, ಅನಿತಾ ಶ್ರೀಧರ್, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಉಡುಪಿ ನಗರಸಭೆ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಪ್ರಧಾನ ಕಾರ್ಯದರ್ಶಿಗಳಾದ ಆಲ್ವಿನ್ ಡಿಸೋಜ, ಆಸಿಫ್ ಕಟಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಬಾಣ, ಜಿಲ್ಲಾ ಮೋರ್ಚಾಗಳ ಸಂಯೋಜಕರಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ವಿಜಯ ಕುಮಾರ್ ಉದ್ಯಾವರ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಉಡುಪಿ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿಗಳಾದ ಸಚಿನ್ ಪೂಜಾರಿ, ಗಣೇಶ್ ಕುಲಾಲ್, ಪ್ರಮುಖರಾದ ರಾಜೇಂದ್ರ ಪಂದುಬೆಟ್ಟು, ಅಕ್ಷಯ್ ಶೆಟ್ಟಿ, ಸದಾನಂದ ಪ್ರಭು, ದಿನಕರ ಪೂಜಾರಿ, ಆನಂದ ಸುವರ್ಣ, ರುಡಾಲ್ಫ್, ಮಾಯಾ ಕಾಮತ್, ಪೂರ್ಣಿಮಾ ರತ್ನಾಕರ್, ಅಶ್ವಿನಿ ಶೆಟ್ಟಿ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply