ಬಿಜೆಪಿ ವಿರೋಧ ಪಕ್ಷದ ನಾಯಕನಾಗಿ ಯತ್ನಾಳ್

ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಮಾಜಿ ಸಚಿವ, ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ಅಶ್ವಥ್ ನಾರಾಯಣ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎನ್ನಲಾಗುತ್ತಿದೆ. 

ವಿಧಾನಸಭೆ ಚುನಾವಣೆ ಫಲಿತಾಂಶ ಬಂದು ಒಂದು ತಿಂಗಳು ಕಳೆದರೂ  66 ಶಾಸಕರಿರುವ ಬಿಜೆಪಿ ಇನ್ನೂ ತಮ್ಮ ಪಕ್ಷದ ನಾಯಕನನ್ನು ಆಯ್ಕೆ ಮಾಡಿಲ್ಲ. ಜುಲೈನಲ್ಲಿ ವಿಧಾನಮಂಡಲ ಅಧಿವೇಶನ  ಆರಂಭಗೊಳ್ಳುವ ಹಿನ್ನೆಲೆಯಲ್ಲಿ ಬಿಜೆಪಿ ಈ ವಾರದ ಅಂತ್ಯದ ವೇಳೆಗೆ ವಿರೋಧ ಪಕ್ಷದ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ. 

ಲಿಂಗಾಯತ ಮತ್ತು ಒಕ್ಕಲಿಗ ನಾಯಕರನ್ನು ಸಂಯೋಜಿಸುವ ನಿಟ್ಟಿನಲ್ಲಿ ಪಕ್ಷದ ಹೈಕಮಾಂಡ್ ಇಬ್ಬರು ಪ್ರಬಲ ನಾಯಕರನ್ನು ಉನ್ನತ ಹುದ್ದೆಗಳಿಗೆ ಆಯ್ಕೆ ಮಾಡಲು ಮುಂದಾಗಿದೆ ಎನ್ನುವ ಮಾಹಿತಿಗಳಿವೆ. ಈಗಾಗಲೇ ಪಕ್ಷದ ಶಾಸಕರು, ಎಂಎಲ್‌ಸಿಗಳು, ಜಿಲ್ಲಾಧ್ಯಕ್ಷರು ಮತ್ತು ಇತರ ನಾಯಕರಿಂದ ಪಕ್ಷದ ನಾಯಕರು ಅಭಿಪ್ರಾಯ ಪಡೆದಿದ್ದಾರೆ. 

ಬಿಜೆಪಿ ಹಾಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವಧಿ ಆಗಸ್ಟ್ 2022 ರಲ್ಲಿ ಕೊನೆಯಾಗಿತ್ತು. ವಿಧಾನಸಭೆ ಚುನಾವಣೆ ಕಾರಣ, ಅವರ ಅಧಿಕಾರಾವಧಿಯನ್ನು ವಿಸ್ತರಿಸಲಾಗಿತ್ತು. ಇವರ ನೇತೃತ್ವದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿತ್ತು. ಇದೀಗ ರಾಜ್ಯಾಧ್ಯಕ್ಷ ಹುದ್ದೆಗೆ ಹಿಂದುಳಿದ ವರ್ಗದ ಸುನಿಲ್ ಕುಮಾರ್ ಮತ್ತು ಒಕ್ಕಲಿಗ ನಾಯಕ ಡಾ.ಸಿಎನ್ ಅಶ್ವಥ್ ನಾರಾಯಣ ಹೆಸರುಗಳು ಕೇಳಿಬಂದಿತ್ತು.

 
 
 
 
 
 
 
 
 
 
 

Leave a Reply