ಅಂಬೇಡ್ಕರ್ ತತ್ವಾದರ್ಶಗಳು, ದೂರದರ್ಶಿತ್ವದ ಚಿಂತನೆಗಳು ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ: ಕೋಟ

ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಸಂವಿಧಾನದ ಆಶಯದಿಂದಾಗಿ ಸಮಾಜದ ಎಲ್ಲ ವರ್ಗಗಳ ಜನತೆಗೆ ಸಾಮಾಜಿಕ ನ್ಯಾಯ ದೊರೆಯುವಂತಾಗಿದೆ. ಅಂಬೇಡ್ಕರ್ ತತ್ವಾದರ್ಶಗಳು, ದೂರದರ್ಶಿತ್ವದ ಚಿಂತನೆಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಕರ್ನಾಟಕ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ಭಾಗವಹಿಸಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಭಾರತೀಯ ಜನತಾ ಪಾರ್ಟಿ ಅಂಬೇಡ್ಕರ್ ರವರಿಗೆ ಸದಾ ಗೌರವವನ್ನು ನೀಡುತ್ತಾ ಬಂದಿದೆ. ಆದರೆ ಅಂಬೇಡ್ಕರ್ ರವರ ಹೆಸರನ್ನು ಕೇವಲ ಚುನಾವಣೆಗೆ ಮಾತ್ರ ಬಳಸುವ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಎರಡೆರಡು ಬಾರಿ ಚುನಾವಣೆಯಲ್ಲಿ ಸೋಲಿಸುವ ಮೂಲಕ ಅವಮಾನಗೈದಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಜೀವಿತಾವಧಿಯ ಪ್ರಮುಖ ಸ್ಥಳಗಳನ್ನು ಪಂಚತೀರ್ಥ ಹೆಸರಿನಲ್ಲಿ ಅಭಿವೃದ್ಧಿಪಡಿಸಿದೆ. ಬಿಜೆಪಿ ಸಂವಿಧಾನದ ಮೌಲ್ಯಗಳನ್ನು ಸದಾ ಎತ್ತಿ ಹಿಡಿಯುತ್ತದೆ. ಪಕ್ಷದ ಕಾರ್ಯಕರ್ತರು ಅಂಬೇಡ್ಕರ್ ರವರ ಆದರ್ಶಗಳನ್ನು ಮೈಗೂಡಿಸಿಕೊಂಡು ರಾಷ್ಟ್ರ ಸೇವೆಯಲ್ಲಿ ತೊಡಗಿಸಿಕೊಳ್ಳುವತ್ತ ಇನ್ನಷ್ಟು ಹೆಚ್ಚಿನ ಪ್ರೇರಣೆ ಪಡೆಯಬೇಕು ಎಂದು ಕೋಟ ಕರೆ ನೀಡಿದರು.

ಈ ಸಂದರ್ಭದಲ್ಲಿ ಎಸ್. ಸಿ. ಮೋರ್ಚಾ ಹಿರಿಯ ಕಾರ್ಯಕರ್ತ ಆನಂದ ಮಟಪಾಡಿ ಮತ್ತು ಅಂತರಾಷ್ಟ್ರೀಯ ಕ್ರೀಡಾಪಟು ಶ್ರೀಲತಾ ಬೈಂದೂರು ಇವರನ್ನು ಜಿಲ್ಲಾ ಎಸ್.ಸಿ. ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು, ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಪ್ರಧಾನ ಕಾರ್ಯದರ್ಶಿಗಳಾದ ಎಸ್. ನಾರಾಯಣ, ಕೃಷ್ಣಮೂರ್ತಿ ಡಿ.ಬಿ., ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ರಾಘವೇಂದ್ರ ಕುಂದರ್, ಅನಿತಾ ಶ್ರೀಧರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಎಸ್.ಸಿ. ಮೋರ್ಚಾ ಉಡುಪಿ ನಗರ ಅಧ್ಯಕ್ಷ ಅಜಿತ್ ಕಪ್ಪೆಟ್ಟು, ಕಾರ್ಮಿಕ ಪ್ರಕೋಷ್ಟದ ರಾಜ್ಯ ಸಮಿತಿ ಸದಸ್ಯ ಶೈಲೇಂದ್ರ ಶೆಟ್ಟಿ, ನಗರಸಭಾ ಸದಸ್ಯೆ ಅನಿಟಾ ಬೆಲಿಂಡ ಡಿಸೋಜಾ, ಪ್ರಮುಖರಾದ ಸಂತೋಷ್ ಸುವರ್ಣ ಬೊಲ್ಜೆ, ಮಾಧವ ಸಾಲಿಗ್ರಾಮ, ಹೆರಿಯಣ್ಣ, ಕಿರಣ್ ಸಹಿತ ಎಸ್.ಸಿ. ಮೋರ್ಚಾ ಸಮಿತಿ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply