ಕೋಟ ಶ್ರೀನಿವಾಸ ಪೂಜಾರಿ ಭರ್ಜರಿ ಗೆಲುವು ನಿಶ್ಚಿತ: ಯಶ್ಪಾಲ್ ಸುವರ್ಣ

ಈ ಬಾರಿ ನಡೆಯುವ ಲೋಕಸಭಾ ಚುನಾವಣೆ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆಯಾಗಿದ್ದು, ದೇಶವನ್ನು ಸಮೃದ್ಧ ಭಾರತ, ವಿಕಸಿತ ಭಾರತ, ವಿಶ್ವಗುರು ಭಾರತ ಮಾಡುವತ್ತ ದಾಪುಗಾಲಿಡುವ ಅತ್ಯಂತ ಮಹತ್ವದ ಚುನಾವಣೆಯಾಗಿದೆ. ದೇಶಭಕ್ತ ಪ್ರಜ್ಞಾವಂತ ದೇಶವಾಸಿಗಳು ನರೇಂದ್ರ ಮೋದಿಯವರನ್ನು ಮಗದೊಮ್ಮೆ ಪ್ರಧಾನಿಯನ್ನಾಗಿಸಿ ದೇಶದ ಏಕತೆ, ಭದ್ರತೆ ಮತ್ತು ಸಮಗ್ರತೆಗೆ ಒತ್ತು ನೀಡುವಲ್ಲಿ ಕೈಜೋಡಿಸಲಿದ್ದಾರೆ ಎಂಬ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ಪ್ರಚಂಡ ಗೆಲುವು ನಿಶ್ಚಿತ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಹೇಳಿದರು.

ಅವರು ಪಂದುಬೆಟ್ಟು ಪರಿಸರದಲ್ಲಿ ನಡೆದ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದರು.

ದೇಶ ಮೊದಲು ಎನ್ನುವ ಉದಾತ್ತ ಚಿಂತನೆಯೊಂದಿಗೆ ಜನಪರ ಯೋಜನೆಗಳ ಜೊತೆಗೆ ಅದ್ಬುತ ಅಭಿವೃದ್ಧಿ ಕೆಲಸ ಕಾರ್ಯಗಳ ಮೂಲಕ ಭಾರತವನ್ನು ವಿಶ್ವದ ಮುಂದುವರಿದ ರಾಷ್ಟ್ರಗಳ ಮುಂಚೂಣಿಯಲ್ಲಿ ನಿಲ್ಲಿಸಲು ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಬೆಂಬಲಿಸಲು ಸಾಧನೆಗಳ ಮೂಲಕವೇ ಜನಮಾನಸದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗರಿಷ್ಠ ಮತಗಳಿಂದ ಅಂತರದಿಂದ ಗೆಲ್ಲಿಸಲು ಎಲ್ಲರೂ ಬದ್ಧತೆಯಿಂದ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

ಬಿಜೆಪಿ ಭರ್ಜರಿ ಪ್ರಚಾರಕ್ಕೆ ಸ್ಟಾರ್ ಪ್ರಚಾರಕರು

ಜಿಲ್ಲೆಯಾದ್ಯಂತ ಬಿಜೆಪಿ ಕಾರ್ಯಕರ್ತರು ಹುಮ್ಮಸ್ಸಿನಿಂದ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಕಾರ್ನರ್ ಸಭೆಗಳ ಸಹಿತ ವಿವಿಧ ಆಯಾಮಗಳಲ್ಲಿ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ ಎಂದ ಶಾಸಕ ಯಶ್ಪಾಲ್ ಸುವರ್ಣರವರು ಸ್ಟಾರ್ ಪ್ರಚಾರಕರ ಸಹಿತ ಮುಂದೆ ನಡೆಯಲಿರುವ ಪ್ರಮುಖ ಸಭೆಗಳು ಮತ್ತು ರೋಡ್ ಶೋ ಗಳ ಕುರಿತು ಮಾಹಿತಿ ನೀಡಿದರು.

ಏ.19 : ‘ಮಹಿಳಾ ಸಮಾವೇಶ’

(ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಮತ್ತು ಮಂಡ್ಯ ಸಂಸದೆ ಸುಮಲತಾ ಅಂಬರೀಷ್)

ರಾಮಕ್ಷತ್ರಿಯ ಸಭಾಭವನ ಉಪ್ಪೂರು, ಬೆಳಿಗ್ಗೆ 11.00ಕ್ಕೆ

ಏ.20 : ‘ಯುವ ಸಂವಾದ’

(ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ)

ಬಿಜೆಪಿ ಜಿಲ್ಲಾ ಕಚೇರಿ ಬಳಿ, ಬೆಳಿಗ್ಗೆ 11.00ಕ್ಕೆ

ಏ.21 : ‘ರೋಡ್ ಶೋ’

(ಮೈಸೂರು ಸಂಸದ ಪ್ರತಾಪ್ ಸಿಂಹ)

ಕಾಪು ಸಂಜೆ 5.00ಕ್ಕೆ 

ಏ.23 : ‘ರೋಡ್ ಶೋ’

(ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ)

ಮಾಬುಕಳ, ಮಧ್ಯಾಹ್ನ 3.00ಕ್ಕೆ

ಬ್ರಹ್ಮಾವರ, ಸಂಜೆ 4.00ಕ್ಕೆ

ಕಾರ್ಕಳ, ಸಂಜೆ 5.00ಕ್ಕೆ 

ಏ.24 : ಸಾರ್ವಜನಿಕ ಸಭೆ

(ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್)

ಮಲ್ಪೆ ಸೀ ವಾಕ್ ಬಳಿ, ಸಂಜೆ 4.00ಕ್ಕೆ

ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರಕಾರ ನೀಡಿದ ಅನುದಾನದ ವಿವರ ನೀಡಲಿ : ಕೆ.ಉದಯ ಕುಮಾರ್ ಶೆಟ್ಟಿ

ಉಚಿತ ಗ್ಯಾರಂಟಿಗಳ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿರುವ ರಾಜ್ಯ ಕಾಂಗ್ರೆಸ್ ಸರಕಾರ ಗ್ಯಾರಂಟಿಗಳನ್ನೂ ಸಮರ್ಪಕವಾಗಿ ಕಾರ್ಯಗತಗೊಳಿಸದೆ ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿ, ಬಿಟ್ಟಿ ಪ್ರಚಾರದಲ್ಲಿ ತೊಡಗಿದೆ. ರಾಜ್ಯದ ಖಜಾನೆಯನ್ನು ಬರಿದಾಗಿಸಿ, ಕೇoದ್ರ ಸರಕಾರದ ಮೇಲೆ ವೃಥಾ ಆರೋಪ ಮಾಡುತ್ತಾ ಜನರ ದಾರಿ ತಪ್ಪಿಸುವ ವಿಫಲ ಯತ್ನದಲ್ಲಿರುವ ರಾಜ್ಯ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಯೋಜನೆಗಳಿಗೆ ಬಿಡುಗಡೆ ಮಾಡಿರುವ ಅನುದಾನದ ವಿವರವನ್ನು ಜನತೆಯ ಮುoದೆ ಬಹಿರಂಗಪಡಿಸಲಿ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಅಗ್ರಹಿಸಿದರು. ಸರಳ ಸಜ್ಜನ ಕ್ರಿಯಾಶೀಲ ರಾಜಕಾರಣಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಲು ಎಲ್ಲರೂ ಸಂಘಟಿತ ಪ್ರಯತ್ನದ ಮೂಲಕ ತೊಡಗಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.

ಉಚಿತ ಖಚಿತ ಖಂಡಿತಗಳ ಯೋಜನೆಗೆ ಪ.ಜಾ. ಸಮುದಾಯಕ್ಕೆ ಮೀಸಲಿಟ್ಟ ಅನುದಾನ ದುರ್ಬಳಕೆ : ಕಿರಣ್ ಕುಮಾರ್ ಬೈಲೂರು ಆರೋಪ

ಅತಿ ಹೆಚ್ಚು ಸಾಲ ಮಾಡಿರುವ ಮುಖ್ಯಮಂತ್ರಿ ಎಂಬ ಕುಖ್ಯಾತಿಗೆ ಪಾತ್ರವಾಗಿರುವ ಸಿದ್ದರಾಮಯ್ಯನವರು ಈಗಾಗಲೇ ಹೆಚ್ಚುವರಿ ಸಾಲವನ್ನು ಮಾಡಿರುವ ಜೊತೆಗೆ ಪರಿಶಿಷ್ಟ ಜಾತಿ ಸಮುದಾಯಕ್ಕೆ ಮೀಸಲಿಟ್ಟಿದ್ದ ಸುಮಾರು 11 ಸಾವಿರ ಕೋಟಿ ಅನುದಾನವನ್ನು ಇತರ ಉದ್ದೇಶಗಳಿಗೆ ಬಳಸಿ ಪ.ಜಾ. ಸಮುದಾಯಕ್ಕೆ ಅನ್ಯಾಯವೆಸಗಿರುವುದು ಜಗಜ್ಜಾಹೀರಾಗಿದೆ. ಸರಕಾರ ಇದೀಗ ಮುದ್ರಾಂಕ ಶುಲ್ಕವನ್ನು 5 ಪಟ್ಟು ಏರಿಕೆ ಮಾಡಿ ಖಜಾನೆ ತುಂಬಿಸಲು ಹೊರಟಿದೆ. ಕಂದಾಯ, ಸಾರಿಗೆ ಸಹಿತ ಎಲ್ಲಾ ಕಚೇರಿಗಳು ಕಾಂಗ್ರೆಸ್ ಸರ್ಕಾರದ ಕಲೆಕ್ಷನ್ ಸೆಂಟರ್ ಗಳಾಗಿವೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು ಆರೋಪಿಸಿದರು. ಜನಸಾಮಾನ್ಯರ ಜನಪ್ರತಿನಿಧಿ ಎಂದೇ ಖ್ಯಾತರಾಗಿರುವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿ ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿಸಲು ಕೊಡುಗೆ ನೀಡಬೇಕು ಎಂದು ಅವರು ವಿನಂತಿಸಿದರು.

ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ಮೆಚ್ಚಿ ಸ್ವಯಂ ಪ್ರೇರಣೆಯಿಂದ ಬಿಜೆಪಿಯತ್ತ ಒಲವು ತೋರಿದ ಬಾಳಿಗಾ ಫಿಶ್ ನೆಟ್ ಕಂ.ಲಿ. ಇದರ ಮಹಾ ಪ್ರಬಂಧಕ ಚಂದ್ರಶೇಖರ್ ಸುವರ್ಣ ಅಂಬಲಪಾಡಿ ಇವರನ್ನು ಶಾಸಕ ಯಶ್ಪಾಲ್ ಸುವರ್ಣ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಸೇರ್ಪಡೆಗೊಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ಅಂಬಲಪಾಡಿ-ಕಡೆಕಾರು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸುಜಾತ ಸುಧಾಕರ್, ಉಡುಪಿ ನಗರ ಯುವ ಮೋರ್ಚಾ ಅಧ್ಯಕ್ಷ ಶ್ರೀವತ್ಸ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ, ನಗರ ಎಸ್.ಸಿ. ಮೋರ್ಚಾ ಅಧ್ಯಕ್ಷ ಅಜಿತ್ ಕಪ್ಪೆಟ್ಟು ಹಾಗೂ ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಶಕ್ತಿಕೇಂದ್ರ ಮತ್ತು ಬೂತ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply