Janardhan Kodavoor/ Team KaravaliXpress
24.6 C
Udupi
Thursday, June 30, 2022
Sathyanatha Stores Brahmavara

ಭಾರತೀಯ ಸಂಸ್ಕೃತಿ ಮತ್ತು ರಾಷ್ಟ್ರೀಯತೆ ನಮ್ಮ ಮೂಲತತ್ತ್ವ: ಬೈಕಾಡಿ ಸುಪ್ರಸಾದ್ ಶೆಟ್ಟಿ

ಭಾರತೀಯ ಜನತಾ ಪಾರ್ಟಿಯು ಕಾರ್ಯಕರ್ತರ ಆಧಾರಿತ ಸಂಘಟನೆಯಾಗಿದ್ದು ದೇಶಭಕ್ತಿ ಮತ್ತು ರಾಷ್ಟ್ರ ವಾದಿ ರಾಜಕಾರಣವನ್ನು ಮಾಡಿ ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರನಿರ್ಮಾಣದ ತತ್ವವನ್ನು ನಂಬಿಕೊಂಡು ಭಾರತೀಯ ಸಂಸ್ಕೃತಿ ಮತ್ತು ರಾಷ್ಟ್ರೀಯತೆಯ ಮೂಲ ತತ್ವದ ಆಧಾರದಲ್ಲಿ ರಾಜಕಾರಣ ಮಾಡುವ ಪಕ್ಷ ನಮ್ಮದು ಎಂದು ಜಿಲ್ಲಾ ಉಪಾಧ್ಯಕ್ಷರು ಕು೦ದಾಪುರ ಮಂಡಲದ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.
ತೆಕ್ಕಟ್ಟೆಯ ಸುಧೀಂಧ್ರ ತೀರ್ಥ ಸಭಾಭವನದಲ್ಲಿ ನಡೆದ ಕುಂದಾಪುರ ಮಂಡಲದ ವಿಶೇಷ ಕಾರ್ಯಕಾರಿಣಿ ಯಲ್ಲಿ ಭಾಗವಹಿಸಿ ಮಾತನಾಡಿ ಕುಂದಾಪುರ ವಿಧಾನಸಭಾ ಕ್ಷೇತ್ರ ಸಂಘಟನಾತ್ಮಕವಾಗಿ ರಾಜಕೀಯವಾಗಿ ಮತ್ತು ಸಾಮಾಜಿಕವಾಗಿ ಇಡೀ ರಾಜ್ಯಕ್ಕೆ ಮಾದರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯನ್ನು ಕುಂದಾಪುರ ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಉದ್ಘಾಟಿಸಿದರು. ಈ ಸಂದರ್ಭ ಕರ್ನಾಟಕ ರಾಜ್ಯ ಆಹಾರ ನಿಗಮ ಮಂಡಳಿಯ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿ ಮಾರ್ಗದರ್ಶನ ಮಾಡಿದರು ಕುಂದಾಪುರ ಮಂಡಲದ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ ಅಧ್ಯಕ್ಷತೆಯನ್ನು ವಹಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ,ಹಿಂದುಳಿದ ವರ್ಗ ಮೋರ್ಚಾದ ರಾಜ್ಯ ಕಾರ್ಯದರ್ಶಿ ವಿಠಲ್ ಪೂಜಾರಿ, ಜಿಲ್ಲಾ ಕಾರ್ಯದರ್ಶಿ ಸದಾನಂದ ಬಳ್ಕೂರು, ಪರಿಶಿಷ್ಟ ಜಾತಿ ಮೋರ್ಚಾದಜಿಲ್ಲಾ ಅಧ್ಯಕ್ಷ ಗೋಪಾಲ್ ಕಳಂಜ, ತೆಕ್ಕಟ್ಟೆ ಶಕ್ತಿಕೇಂದ್ರದ ಅಧ್ಯಕ್ಷ ಕಿರಣ್ ಕುಮಾರ್ ಉಪಸ್ಥಿತರಿದ್ದರು.ಮಂಡಲ ಪ್ರಧಾನ ಕಾರ್ಯದರ್ಶಿ ಸುರೇಶ್ ಶೆಟ್ಟಿ ಸ್ವಾಗತಿಸಿದರು, ಮಂಡಲ ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ವಕ್ವಾಡಿ ಕಾರ್ಯಕ್ರಮ ನಿರ್ವಹಿಸಿ ಕಾರ್ಯದರ್ಶಿ ಸುರೇಂದ್ರ ಕಾಂಚನ್ ಧನ್ಯವಾದ ಸಮರ್ಪಿಸಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!