ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಇಂದ ಸ್ವಾಗತ

ಕೇಂದ್ರ ಸರಕಾರದ ಮೂಲಕ ರಾಜ್ಯಸಭೆಗೆ ನಾಮ ನಿರ್ದೇಶನಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪದ್ಮವಿಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರಮಾಣ ವಚನ ಸ್ವೀಕರಿಸಲು ದೆಹಲಿಗೆ ಆಗಮಿಸಿದ ಸಂದರ್ಭದಲ್ಲಿ ದೆಹಲಿ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ಸ್ವಾಗತಿಸಿ ಸ್ವಾಗತಿಸಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ತೇಜಸ್ವಿ ಸೂರ್ಯ, ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್, ಮಲ್ಪೆ ಯಾಂತ್ರಿಕ ಟ್ರಾಲ್ ದೋಣಿ ಮೀನುಗಾರರ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ರಾಮ ಚಂದ್ರ ಕುಂದರ್, ಮೀನುಗಾರ ಮುಖಂಡರಾದ ಶ್ರೀ ಕಿಶೋರ್ ಡಿ. ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply