Janardhan Kodavoor/ Team KaravaliXpress
23.6 C
Udupi
Friday, December 2, 2022
Sathyanatha Stores Brahmavara

ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತರು ಬಿಜೆಪಿ ಸೇರ್ಪಡೆ

ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಶ್ರೀ ಕೆ ರಘುಪತಿ ಭಟ್ ಅವರ ಕಾರ್ಯ ವೈಖರಿ, ಜನಪರ ಕಾಳಜಿ ಹಾಗೂ ಕ್ಷೇತ್ರದಾದ್ಯಂತ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್ ಪಕ್ಷದ ಪ್ರಮುಖ ಕಾರ್ಯಕರ್ತರು, ಗ್ರಾಮ ಪಂಚಾಯತ್ ಮಾಜಿ ಸದಸ್ಯರು ಇಂದು ದಿನಾಂಕ 15-10-2022 ರಂದು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು.

ಎರಡು ಬಾರಿ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಬಾವ್ತಿಸ್ ಡಿಸೋಜಾ ಹಾಗೂ ಕಾಂಗ್ರೆಸ್ ಪಕ್ಷದ ಪ್ರಮುಖ ಕಾರ್ಯಕರ್ತರಾದ ಗೋಪಾಲ ದೇವಾಡಿಗ, ಹರೀಶ್ ಆಚಾರ್ಯ, ಪ್ರವೀಣ್ ಡಿಸೋಜಾ, ರಾಘವೇಂದ್ರ ಕೆಳ್ಕರ್ ಭಾರತೀಯ ಜನತಾ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾದರು.

ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಭಾರತೀಯ ಜನತಾ ಪಕ್ಷದ ಬಾವುಟವನ್ನು ನೀಡಿ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷರಾದ ವೀಣಾ ನಾಯ್ಕ್, ನೀಲಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಂದ್ರ ಕುಮಾರ್, ಉಪಾಧ್ಯಕ್ಷರಾದ ಬೇಬಿ, ರಾಜ್ಯ ಎಸ್.ಟಿ. ಮೋರ್ಚಾದ ಕಾರ್ಯದರ್ಶಿಗಳಾದ ಉಮೇಶ್ ನಾಯ್ಕ್, ಗ್ರಾಮಾಂತರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಸಚಿನ್ ಪೂಜಾರಿ, ನೀಲಾವರ ಗ್ರಾಮ ಸರ್ವ ಸದಸ್ಯರು ಉಪಸ್ಥಿತರಿದ್ದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!