ಮಾಜಿ ಸಿಎಂ ಬಿಎಸ್​‌ವೈಗೆ ಬಿಗ್ ರಿಲೀಫ್ : ಡಿನೋಟಿಫಿಕೇಷನ್​ ಪ್ರಕರಣ​ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಹೈಕೋರ್ಟ್​ ರದ್ದುಪಡಿಸಿದೆ. ಆ ಮೂಲಕ ಬಿ.ಎಸ್​ ಯಡಿಯೂರಪ್ಪ ಅವರಿಗೆ ಬಿಗ್​ ರಿಲೀಫ್ ನೀಡಿದೆ.

2015ರಲ್ಲಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಲಾಗಿತ್ತು. ಈ ಹಿಂದೆ ಸಿಎಜಿ ವರದಿ ಆಧರಿಸಿದ 15 ಕೇಸ್ ಹೈಕೋರ್ಟ್ ರದ್ದುಪಡಿಸಿತ್ತು. ಹಿಂದಿನ ತೀರ್ಪು ಆಧರಿಸಿ 19 ಡಿಸೆಂಬರ್​ 2015ರ ಕೇಸ್​ನ್ನು ಹೈಕೋರ್ಟ್ ರದ್ದುಪಡಿಸಿದೆ.

2013ರಲ್ಲಿ ನ್ಯಾಯಾಲಯಕ್ಕೆ ಖಾಸಗಿ ದೂರು 2006-07ರಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಯಡಿಯೂರಪ್ಪ ಅವರು ಕಾನೂನಿನ ವಿರುದ್ಧವಾಗಿ ಬೆಳ್ಳಂದೂರು ಮತ್ತು ದೇವರಬೀಸನಹಳ್ಳಿ ಗ್ರಾಮಗಳಲ್ಲಿ ಎಂಟು ಎಕರೆ ಹತ್ತು ಗುಂಟೆ ಜಮೀನನ್ನು ಡಿನೋಟಿಫೈ ಮಾಡಿದ್ದಾರೆ ಎಂದು ಆರೋಪಿಸಿ ವಾಸುದೇವ ರೆಡ್ಡಿ ಎಂಬುವರು 2013ರಲ್ಲಿ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು.

ಬಳಿಕ ಕೋರ್ಟ್ ಆದೇಶದಂತೆ 2015ರ ಫೆಬ್ರವರಿ 21ರಂದು ಲೋಕಾಯುಕ್ತ ಪೊಲೀಸರು ಎಫ್​ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದರು. ನಂತರ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡುಬಂದಿಲ್ಲ. ಈ ಹಿನ್ನೆಲೆಯಲ್ಲಿ ಪ್ರಕರಣ ರದ್ದು ಮಾಡುವಂತೆ ಕೋರಿ ಯಡಿಯೂರಪ್ಪ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ಆದ್ರೆ, ಅದನ್ನು 2020ರಲ್ಲಿ ಹೈಕೋರ್ಟ್ ವಜಾ ಮಾಡಿತ್ತು. ತನಿಖೆಯನ್ನು ವಿಳಂಬಗೊಳಿಸುತ್ತಿರುವುದಕ್ಕೆ ಪೊಲೀಸರನ್ನು ಹೈಕೋರ್ಟ್ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರು ತರಾಟೆಗೆ ತೆಗೆದುಕೊಂಡಿದ್ದರು. ತನಿಖೆಯನ್ನು ಉದ್ದೇಶ ಪೂರ್ವಕವಾಗಿ ತಡ ಮಾಡಲಾಗುತ್ತಿದೆ ಎನ್ನುವುದು ಸ್ಪಷ್ಟವಾಗಿ ಕಂಡುಬರುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದರು.

 
 
 
 
 
 
 
 
 
 
 

Leave a Reply